ಕೇಂದ್ರ ನಾಯಕರ ಸೂಚನೆ ಪಾಲಿಸುತ್ತೇನೆ,ವರಿಷ್ಟರು ಹೇಳಿದಂತೆ ಕೇಳುವೆ,ಕಾರ್ಯಕರ್ತರು, ಶ್ರೀಗಳು ಸಹಕಾರ ನೀಡಿ -ರಾಜಿನಾಮೆ ಕುರಿತು ಹೇಳಿಕೆ ನೀಡಿದ ಯಡಿಯೂರಪ್ಪ

ಕೇಂದ್ರದ ನಾಯಕರು ನೀಡಿದ ಸೂಚನೆ ಪಾಲಿಸಲು ಸಿದ್ದನಿದ್ದೇನೆ. ಕೇಂದ್ರ ಹೇಳಿದಂತೆ ಕೇಳುತ್ತೇನೆ. ಕಾರ್ಯಕರ್ತರು, ಶ್ರೀಗಳು ಸಹಕಾರ ನೀಡಬೇಕು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

 

ಬೆಂಗಳೂರಿನಲ್ಲಿ ಮಾತನಾಡಿದ ಅವರು ತನ್ನ ರಾಜೀನಾಮೆ ಕುರಿತು ಸುಳಿವು ನೀಡಿದ್ದಾರೆ.

75 ವರ್ಷ ಮೀರಿದ ಯಾರಿಗೂ ಬಿಜೆಪಿಯಲ್ಲಿ ಅಧಿಕಾರ ನೀಡಿಲ್ಲ. ‌ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ‌ ಹಾಗೂ ಜೆಪಿ ‌ನಡ್ಡಾ ನನ್ನ ಬಗ್ಗೆ ವಿಶೇಷ ಕಾಳಜಿ ತೋರಿಸಿ ಅಧಿಕಾರ ನೀಡಿದ್ದಾರೆ.

ಬಿಜೆಪಿಯ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದ ಯಡಿಯೂರಪ್ಪ ಅವರು ರಾಜ್ಯದ ವಿವಿಧ ಮಠಾಧೀಶರು ನನ್ನ ಬಗ್ಗೆ ತೋರಿಸಿದ ವಿಶೇಷ ಕಾಳಜಿಗೆ ಧನ್ಯವಾದ ಸಮರ್ಪಿಸಿದ್ದಾರೆ.

ಜುಲೈ 26 ಕ್ಕೆ ನಾನು ಎರಡು ವರ್ಷ ಅಧಿಕಾರ ಪೂರೈಸುತ್ತೇನೆ. ನಂತರ ಕೇಂದ್ರದ ನಾಯಕರು ನೀಡಿದ ಸೂಚನೆ ಪಾಲಿಸಲು ಸಿದ್ದ ಎಂದಿದ್ದಾರೆ.

Leave A Reply

Your email address will not be published.