ಚಾರ್ಮಾಡಿ ಘಾಟಿಯಲ್ಲಿ ವಾಹನ ನಿಲುಗಡೆ ಸಂಪೂರ್ಣ ನಿಷೇಧಿಸಿದ ಜಿಲ್ಲಾಡಳಿತ
ಬೆಳ್ತಂಗಡಿ: ಚಾರ್ಮಾಡಿ ಘಾಟ್ ನ ಮಳೆಗಾಲದ ರುದ್ರ ರಮಣೀಯ ಸೌಂದರ್ಯವನ್ನು ವೀಕ್ಷಿಸಲು ಪ್ರವಾಸಿಗರು ದಂಡು ದಂಡಾಗಿ ಆಗಮಿಸುತ್ತಿದ್ದಾರೆ. ಲಾಕ್ ಡೌನ್ ಸಡಿಲಗೊಳ್ಳುತ್ತಿದ್ದಂತೆ ಚಾರ್ಮಾಡಿ ಬೆಟ್ಟದ ತಪ್ಪಲಿನ ಜಲಧಾರೆಯ ದೃಶ್ಯದ ಸೊಬಗು ಕಣ್ಣು ತುಂಬಿಕೊಳ್ಳುವುದಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಜನ ಆಗಮಿಸುತ್ತಿದ್ದಾರೆ.
ಈಗ ದಕ್ಷಿಣ ಕನ್ನಡ ಜಿಲ್ಲಾಡಳಿತ ಪ್ರವಾಸಿಗರಿಗೆ ಮಹತ್ವದ ಸೂಚನೆ ಹೊರಡಿಸಿದೆ. ಚಾರ್ಮಾಡಿ ಘಾಟ್ ನಲ್ಲಿ ವಾಹನ ನಿಲುಗಡೆ ಸಂಪೂರ್ಣ ನಿಷೇಧ ಮಾಡಿದೆ. ರಸ್ತೆ ಕುಸಿತ ಉಂಟಾದ ಶಿರಾಡಿ ಘಾಟ್ ನಲ್ಲಿ ಸಂಚಾರ ಬಂದ್ ಆದ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರ ತುಸು ಹೆಚ್ಚಳವಾಗುವ ಕಂಡುಬಂದಿದ್ದು, ಈ ಹಿನ್ನೆಲೆ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಅಲ್ಲದೆ ಇನ್ನೂ ಮುಂದೆ ಚಾರ್ಮಾಡಿ ಘಾಟ್ ನಲ್ಲಿ ವಾಹನ ನಿಲ್ಲಿಸುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ ಮತ್ತು ಅಲ್ಲಿ ರಸ್ತೆಗಳಲ್ಲಿ ಪ್ರವಾಸಿಗರ ವಾಹನದ ಮೇಲೆ ಕಣ್ಣಿಡಲು ಹೈವೇ ಪೆಟ್ರೋಲ್ ನಿಯೋಜಿಸಲಾಗಿದೆ.