ಆಸ್ಪತ್ರೆಗೆ ದಾಖಲಾಗಿರುವ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದ ಡಾ.ವೀರೇಂದ್ರ ಹೆಗ್ಗಡೆ
ಮಂಗಳೂರು: ಯೋಗ ಮಾಡುತ್ತಿದ್ದಾಗ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಕಾಂಗ್ರೇಸ್ ಹಿರಿಯ ಮುಖಂಡ, ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಆರೋಗ್ಯ ವಿಚಾರಿಸಲು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಆಸ್ಪತ್ರೆಗೆ ಭೇಟಿ ನೀಡಿದರು.
ಆಸ್ಕರ್ ಫರ್ನಾಂಡಿಸ್ ಮಂಗಳೂರಿನ ಯೆನಪೋಯ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಡಾ
ಡಿ.ವೀರೇಂದ್ರ ಹೆಗ್ಗಡೆಯವರು ಶನಿವಾರ ಆಸ್ಪತ್ರೆಗೆ ಬೇಟಿ ನೀಡಿದರು.ಈ ಸಂದರ್ಭ ಮಾಜಿ ಸಚಿವ ರಮಾನಾಥ ರೈ ಮೊದಲಾದವರಿದ್ದರು.
ನಿನ್ನೆಯಷ್ಟೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಸಹಿತ ಹಲವಾರು ನಾಯಕರು ಈಗಾಗಲೇ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಆರೋಗ್ಯ ವಿಚಾರಿಸಿದ್ದರು.