ಕೋಟ ಶ್ರೀನಿವಾಸ್ ಪೂಜಾರಿಯವರೇ ಮುಂದಿನ ಸಿಎಂ ಆಗಬೇಕು | ಪ್ರಣವಾನಂದ ಸ್ವಾಮೀಜಿ ಆಗ್ರಹ

ಕೊಪ್ಪಳ : ಸಿಎಂ ಸ್ಥಾನದಿಂದ ಯಡಿಯೂರಪ್ಪನವರನ್ನು ಕೆಳಗಿಳಿಸಿದರೆ ಕೋಟಾ ಶ್ರೀನಿವಾಸ ಪೂಜಾರಿಯವರನ್ನು ಮುಂದಿನ ಸಿಎಂ ಮಾಡಬೇಕು ಎಂದು ಪ್ರಣವಾನಂದ ಸ್ವಾಮೀಜಿ ಅವರು ಹೇಳಿದ್ದಾರೆ.

ಸಣ್ಣ ಸಣ್ಣ ಸಮಾಜಕ್ಕೆ ನಿಗಮ ಮಂಡಳಿ ಘೋಷಣೆ ಮಾಡಿದ್ದಾರೆ. ಕೂಡಲೇ ಸರ್ಕಾರ ಬ್ರಹ್ಮಶ್ರೀ ನಾರಾಯಣಸ್ವಾಮಿ ನಿಗಮ ಮಂಡಳಿ ಸ್ಥಾಪನೆ ಮಾಡಬೇಕು. ಆರ್ಯ ಈಡಿಗ ಸಮಾಜಕ್ಕೆ ಈಗಾಗಲೇ ಸರ್ಕಾರದಿಂದ ಸಾಕಷ್ಟು ಅನ್ಯಾಯವಾಗಿದೆ. ಹೀಗಾಗಿ ಮುಖ್ಯಮಂತ್ರಿ ಬದಲಾವಣೆಯಾದರೆ ಮುಖ್ಯಮಂತ್ರಿ ಸ್ಥಾನವನ್ನು ಕೋಟ ಶ್ರೀನಿವಾಸ ಪೂಜಾರಿಗೆ ಕೊಡಬೇಕು ಎಂದು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಪ್ರಣವಾನಂದ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.

ಚುನಾವಣೆ ಬಂದಾಗ ಮಾತ್ರ ನಮ್ಮ ಸಮಾಜ ನೆನಪಾಗುತ್ತದೆ. ಉನ್ನತ ಹದ್ದೆಯಲ್ಲಿರುವ ಸಮಾಜದ ಪ್ರಮುಖರು ಅನ್ಯಾಯವನ್ನು ಪ್ರತಿಭಟಸದೇ ಮೌನವಾಗಿದ್ದಾರೆ. ನಮ್ಮ ಸಮಾಜಕ್ಕೆ ಸರಿಯಾಗಿ ಸರ್ಕಾರಗಳು ಸ್ಪಂದನೆ ಮಾಡದೆ ಹೋದರೆ ಭವಿಷ್ಯದಲ್ಲಿ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದು, ನಮ್ಮ ಸಮಾಜದ ಹುಲಿಗಳಾದ ಮಾಲೀಕಯ್ಯ ಗುತ್ತೆದಾರ, ಎಚ್.ಆರ್.ಶ್ರೀನಾಥ್ ನೇತೃತ್ವದಲ್ಲಿ ಹೋರಾಟ ನಡೆಸುತ್ತೇವೆ ಎಂದಿದ್ದಾರೆ.

Ad Widget


Ad Widget


Ad Widget

Ad Widget


Ad Widget

Leave a Reply

Ad Widget >>^
Ad Widget
error: Content is protected !!
Scroll to Top
%d bloggers like this: