ಶೀಘ್ರದಲ್ಲೇ ಬರಲಿದೆ ತುಳು ಲಿಪಿ ಉಳ್ಳ KMF ಉತ್ಪನ್ನಗಳ ಪ್ಯಾಕೆಟ್ | ವೇದವ್ಯಾಸ ಕಾಮತ್ ಅವರಿಂದ ಬೇಡಿಕೆ ಸಲ್ಲಿಕೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆ.ಎಂ.ಎಫ್ ಸಂಸ್ಥೆಯಿಂದ ಸರಬರಾಜಾಗುವ ಉತ್ಪನ್ನಗಳ ಪೊಟ್ಟಣಗಳ ಮೇಲೆ ತುಳು ಲಿಪಿಯ ವರ್ಣಮಾಲೆ ಮುದ್ರಿಸಿ ಹಂಚುವಂತೆ ಶಾಸಕ ವೇದವ್ಯಾಸ್ ಕಾಮತ್ ದಕ್ಷಿಣ ಕನ್ನಡ ಹಾಲು ಉತ್ಪಾದಕ ಸಂಸ್ಥೆಯ ಅಧ್ಯಕ್ಷರಿಗೆ ಹಾಗೂ ವ್ಯವಸ್ಥಾಪನಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.
ಈ ವಿಚಾರವಾಗಿ ಮಾತನಾಡಿದ ಶಾಸಕ ಕಾಮತ್, ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯಲ್ಲಿ ಮಾತನಾಡುವ ತುಳುಭಾಷೆಗೆ ಐತಿಹಾಸಿಕ ಹಿನ್ನೆಲೆಯಿದೆ. ಅನೇಕ ಶಾಸನಗಳಲ್ಲಿ ತುಳುಲಿಪಿ ಕಂಡು ಬಂದಿದೆ. ಭಾಷೆಯ ಉಳಿವು ಅದನ್ನು ಬಳಸಿದಾಗ ಮಾತ್ರ ಸಾಧ್ಯ. ಆ ನಿಟ್ಟಿನಲ್ಲಿ ಕೆ.ಎಂ.ಎಫ್ ಸಂಸ್ಥೆಯ ಉತ್ಪನ್ನಗಳ ಪೊಟ್ಟಣಗಳ ಮೇಲೆ ತುಳುಲಿಪಿಯ ವರ್ಣಮಾಲೆಯ ಬಳಕೆಗೆ ಈಗಾಗಲೇ ಅಧ್ಯಕ್ಷರಿಗೆ ಮತ್ತು ವ್ಯವಸ್ಥಾಪನಾ ನಿರ್ದೇಶಕರಿಗೆ ಪತ್ರ ಬರೆದಿದ್ದೇನೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಸಹಕಾರಿ ಸಚಿವರಿಗೂ ಇದರ
ಕುರಿತು ಮಾಹಿತಿ ನೀಡಿ, ಇದನ್ನು ಕಾರ್ಯಗತಗೊಳಿಸಲು
ಪ್ರಯತ್ನಿಸುತ್ತೇನೆ ಎಂದು ಇದೇ ವೇಳೆ ಅವರು ಭರವಸೆ ನೀಡಿದರು.