ಹಿಂದೂಗಳು ಹಾಕಿದ ಕಾಣಿಕೆ ದುಡ್ಡು ಅನ್ಯ ಧರ್ಮೀಯರ ಸವಲತ್ತುಗಳಿಗೆ ಹೋಗೋದು ಇನ್ಮುಂದೆ ಬಂದ್ | ಅಧಿಕೃತ ಆದೇಶ ಪ್ರಕಟ

Share the Article

ಹಿಂದು ಧಾರ್ಮಿಕ ದತ್ತಿ ಇಲಾಖೆಯಿಂದ ಹಿಂದುಯೇತರ ಧಾರ್ಮಿಕ ಸಂಸ್ಥೆಗಳಿಗೆ ನೀಡುತ್ತಿದ್ದ ತಸ್ತಿಕ್ ಮತ್ತು ವರ್ಷಾಸನಕ್ಕೆ ತಡೆ ನೀಡಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ಮುಜರಾಯಿ ದೇವಸ್ಥಾನದ ಹುಂಡಿ ಹಣವನ್ನು ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಸ್ತಿಕ್ ಮತ್ತು ವರ್ಷಾಸನ ಬಿಡುಗಡೆ ಬಗ್ಗೆ ಈ ಹಿಂದೆಯೇ ವಿರೋಧ ವ್ಯಕ್ತವಾಗಿತ್ತು. ಈ ಬಗ್ಗೆ ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಡೆ ನೀಡಿದ್ದರು. ಇವರ ಆದೇಶದಂತೆ ಹಿಂದು ಧಾರ್ಮಿಕ ದತ್ತಿ ಇಲಾಖೆ ದೇವಸ್ಥಾನದ ಹಣ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ಕೊಡದಂತೆ ತಡೆ ನೀಡಿ ಆದೇಶಿಸಿದೆ.

ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಸ್ತಿಕ್ ಮತ್ತು ವರ್ಷಾಸನ ಬಿಡುಗಡೆ ಕುರಿತು ಎದ್ದಿರುವ ಚರ್ಚೆಯ ಕುರಿತು ಸರ್ಕಾರ ಅಂತಿಮ ತೀರ್ಮಾನ ಕೈಗೊಂಡಿದೆ. ರಾಜ್ಯದ 757 ಪ್ರಾರ್ಥನಾ ಕೇಂದ್ರಗಳಿಗೆ ತಸ್ತಿಕ್ ಹಾಗೂ 111 ವರ್ಷಾಸನ ಪಡೆಯುತ್ತಿರುವ ಪ್ರಾರ್ಥನಾ ಕೇಂದ್ರಗಳಿಗೆ ಸರ್ಕಾರ ಧಾರ್ಮಿಕ ದತ್ತಿ ಇಲಾಖೆ ಮೂಲಕ ನೀಡುತ್ತಿದ್ದ ಅನುದಾನ ತಡೆ ಹಿಡಿದು ಅಧಿಕೃತ ಆದೇಶ ಹೊರಡಿಸಿದೆ.

ಇನಾಂ ರದ್ದತಿ ಕಾಯ್ದೆ 1977ರ ಪರಿಹಾರಾರ್ಥವಾಗಿ ನೀಡುತ್ತಿರುವ ತಸ್ತಿಕ್ ಮತ್ತು ವರ್ಷಾಸನವನ್ನು ಇನ್ನು ಮುಂದೆ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಇಲಾಖೆ ಮೂಲಕ ತಸ್ತಿಕ್ ಮತ್ತು ವರ್ಷಾಸನ ನೀಡಲು ಅನುದಾನ ಬಿಡುಗಡೆ ಮಾಡತಕ್ಕದ್ದು ಎಂದು ರಾಜ್ಯ ಧಾರ್ಮಿಕ ದತ್ತಿ ಇಲಾಖೆ ಆದೇಶದಲ್ಲಿ ಉಲ್ಲೇಖಿಸಿದೆ.

Leave A Reply

Your email address will not be published.