ಯಶಸ್ ಆನ್ ಲೈನ್ ಪ್ರವೇಶ ಪರೀಕ್ಷೆ: ಅರ್ಜಿ ಸಲ್ಲಿಸಲು ಜುಲೈ 29 ಕೊನೆಯ ದಿನ

ಪುತ್ತೂರು: ಕರಾವಳಿಯ ಭಾಗದಿಂದ ಹೆಚ್ಚು ವಿದ್ಯಾರ್ಥಿಗಳು ಆಡಳಿತ ಕ್ಷೇತ್ರಕ್ಕೆ ಆಯ್ಕೆಯಾಗಬೇಕು ಎಂಬ ಉದ್ದೇಶದಿಂದ, ಪಿಯುಸಿಯಿಂದ ಪದವಿಯವರೆಗೆ ಅಧ್ಯಯನದ ಜೊತೆಗೆ ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಪ್ರಕಲ್ಪ ವಿವೇಕಾನಂದ ಅಧ್ಯಯನ ಕೇಂದ್ರ- ಯಶಸ್. ಇದರ ಈ ಬಾರಿಯ ವಿದ್ಯಾರ್ಥಿಗಳ ಆಯ್ಕೆಗೆ ನಡೆಸುವ ಪ್ರವೇಶ ಪರೀಕ್ಷೆಯು ಜುಲೈ 31 ರಂದು ನಡೆಯಲಿದೆ.

 

ಕೊರೋನಾ ಕಾರಣದಿಂದಾಗಿ ಈ ಬಾರಿ ಆನ್ ಲೈನ್ ಮೂಲಕ ನಡೆಯಲಿರುವ ಪ್ರವೇಶ ಪರೀಕ್ಷೆಗೆ ಒಂಬತ್ತನೆ ತರಗತಿಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವ ಮತ್ತು 2020-21ನೇ ಸಾಲಿನಲ್ಲಿ ಹತ್ತನೇ ತರಗತಿಯ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಲು ಜುಲೈ 29 ಕೊನೆಯ ದಿನವಾಗಿದೆ.

ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸಂದರ್ಶಿಸಿ ನಂತರ 25 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಐದು ವರ್ಷದ ಐಎಎಸ್, ಕೆಎಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9901852117 ಅಥವಾ ವೆಬ್‌ಸೈಟ್ yashas.vivekanandaedu.org ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

5 Comments
  1. MichaelLiemo says

    ventolin online usa: buy Ventolin – no prescription ventolin
    cheap ventolin

  2. Josephquees says

    neurontin 30 mg: how much is neurontin pills – order neurontin

  3. Josephquees says

    lasix uses: buy furosemide – lasix tablet

  4. Timothydub says

    indian pharmacy online: Indian pharmacy international shipping – buy prescription drugs from india

  5. Timothydub says

    canadianpharmacy com: Canadian Pharmacy – global pharmacy canada

Leave A Reply

Your email address will not be published.