ಅಯೋಧ್ಯೆಯ ಹೆದ್ದಾರಿಯಲ್ಲಿ ಡಬ್ಬಲ್ ಡೆಕ್ಕರ್ ಬಸ್ – ಟ್ರಕ್ ಅವಘಡ | 18 ಜನ ಸಾವು

ಉತ್ತರಪ್ರದೇಶ: ಲಖನೌ – ಅಯೋಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಮತ್ತು ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 18 ಮಂದಿ ಮೃತಪಟ್ಟ ಘಟನೆ ನಡೆದಿದೆ.

 

ವೇಗವಾಗಿ ಚಲಿಸುತ್ತಿದ್ದ ಟ್ರಕ್‌ಗೆ ಹಿಂದಿನಿಂದ ಡಬಲ್ ಡೆಕ್ಕರ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಅಪಘಾತದಲ್ಲಿ ಒಟ್ಟು ಹದಿನೆಂಟು ಮಂದಿ ಸಾವನ್ನಪ್ಪಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಈಗಾಗಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸ್ಸಿನಡಿ ಇನ್ನೂ ಹಲವಾರು ಮಂದಿ ಸಿಲುಕಿಕೊಂಡಿದ್ದು, ಅವರನ್ನು ಹೊರತೆಗೆಯುವ ಕಾರ್ಯ ನಡೆಸುತ್ತಿರುವುದಾಗಿ ಲಖನೌ ವಲಯ ಎಡಿಜಿ ನಾರಾಯಣ್ ಸಬತ್ ಮಾಹಿತಿ ನೀಡಿದ್ದಾರೆ.

ಬಸ್ ಹರಿಯಾಣದಿಂದ ಬಿಹಾರಕ್ಕೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಪ್ರಾರಂಭಿಸಿದ್ದಾರೆ.

Leave A Reply

Your email address will not be published.