ಅಪಘಾತ ತಪ್ಪಿಸಲು ಹೋಗಿ ಕೆರೆಗೆ ಉರುಳಿದ ಕೆಎಸ್ಸಾರ್ಟಿಸಿ ಬಸ್

Share the Article

ಹಲವು ಜನರಿದ್ದ ಕೆಎಸ್ಸಾರ್ಟಿಸಿ ಬಸ್ ಒಂದು ಎದುರಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಕ್ಕದಲ್ಲಿದ್ದ ಕೆರೆಗೆ ಉರುಳಿ ಬಿದ್ದಿದ್ದು, ಇದೀಗ ಸ್ಕೂಟಿ ಸವಾರನೊಬ್ಬ ಚಿಕಿತ್ಸೆ ಫಲಕಾರಿ ಆಗದೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾಸ್ಪಾಡಿಯಲ್ಲಿ ನಡೆದಿದೆ.

ಇಂದು ಮುಂಜಾನೆ ಶಿವಮೊಗ್ಗ ಘಟಕಕ್ಕೆ ಸೇರಿದ ಬಸ್ ಸಾಗರದಿಂದ ವಾಪಸ್ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ, ಶಿವಮೊಗ್ಗದಿಂದ ಸಿಗಂಧೂರಿಗೆ ಹೊರಟಿದ್ದ ಯುವಕರು ಸ್ಕೂಟಿಯಲ್ಲಿ ವೇಗವಾಗಿ ಬರುತ್ತಿದ್ದರು. ಈ ವೇಳೆ ಸ್ಕೂಟಿಗೆ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ವೇಳೆ ಅಪಘಾತ ಸಂಭವಿಸಿದೆ.

ಸ್ಕೂಟಿ ಸವಾರರಾದ ದೀಪು ಹಾಗೂ ಪ್ರಜ್ವಲ್
ಗಂಭೀರ ಗಾಯಗೊಂಡಿದ್ದು,ತಕ್ಷಣ ಯುವಕರನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ದೀಪು ಮೃತಪಟ್ಟಿದ್ದಾನೆ. ಇವನು ಶಿವಮೊಗ್ಗ ಗಾಂಧಿ ಬಜಾರಿನ ನಿವಾಸಿ ಎಂದು ತಿಳಿದುಬಂದಿದೆ.

ಬಸ್ಸಿನಲ್ಲಿದ್ದ 27 ಮಂದಿ ಪ್ರಯಾಣಿಕರಿಗೆ ಸಣ್ಣ ಮಟ್ಟಿನ ಗಾಯಗಳಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಾಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave A Reply