ಪ್ರಧಾನಿ ಮೋದಿ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

Share the Article

ರಾಜ್ಯ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಬಸವರಾಜ ಬೊಮ್ಮಾಯಿಯವರು ಮೊದಲ ದೆಹಲಿ ಪ್ರವಾಸದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದರು.

ಮಧ್ಯಾಹ್ನ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ ನಂತರ ಅಮಿತ್ ಶಾ, ಅಧ್ಯಕ್ಷ ಜೆ ಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರನ್ನು ಸಹ ಭೇಟಿ ಮಾಡಿದರು.

ಇಂದಿನ ದೆಹಲಿ ಭೇಟಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಧನ್ಯವಾದ ಹೇಳಲು ಬಂದಿರುವ ಭೇಟಿ, ಸಂಪುಟ ರಚನೆ ಬಗ್ಗೆ ಚರ್ಚಿಸುವುದಿಲ್ಲ ಎಂದು ಸಿಎಂ ಬೊಮ್ಮಾಯಿಯವರು ಹೇಳಿದರೂ ಕೂಡ ಹಲವು ಸಚಿವಾಕಾಂಕ್ಷಿ ಶಾಸಕರು ಈಗ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.

Leave A Reply

Your email address will not be published.