ದ.ಕ ಸೋಂಕು ನಿಯಂತ್ರಣಕ್ಕೆ ಹೊಸ ಆದೇಶ | ಆ.10 ರವರೆಗೆ ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮ ರದ್ದು

ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ದ.ಕ.ದಲ್ಲಿ ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು
ಆಗಸ್ಟ್ 10ರವರೆಗೆ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ.

ಮದುವೆ ಕಾರ್ಯಕ್ರಮಗಳಿಗೆ ಕೇವಲ 50 ಜನರಿಗೆ ಅವಕಾಶ, ಹೆಚ್ಚಿನ ಜನ ಸೇರಿಸಿದ್ದಲ್ಲಿ ಕಲ್ಯಾಣ ಮಂಟಪ ಮಾಲಕರ ಮೇಲೆ ಎಫ್‌ಐಆರ್‌,ಮಾಸ್ಕ್ ಧರಿಸದೇ ಇದ್ದಲ್ಲಿ ದಂಡ ವಿಧಿಸಲು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಪತ್ತು ನಿರ್ವಹಣಾ ಸಭೆಯಲ್ಲಿ
ಸಂಸದ ನಳಿನ್ ಕುಮಾರ್ ಪಾಲ್ಗೊಂಡಿದ್ದರು. ಹಾಗೆಯೇ ಶಾಸಕರುಗಳಾದ ಶ್ರೀ ಡಾ. ವೈ ಭರತ್ ಶೆಟ್ಟಿ, ಶ್ರೀ ವೇದವ್ಯಾಸ್ ಕಾಮತ್, ವಿಧಾನಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಶ್ರೀ ಪ್ರೇಮಾನಂದ್ ಶೆಟ್ಟಿ, ಜಿಲ್ಲಾಧಿಕಾರಿಗಳಾದ ಶ್ರೀ ಡಾ. ರಾಜೇಂದ್ರ ಕೆ ವಿ, ಮಹಾನಗರಪಾಲಿಕೆ ಆಯುಕ್ತರು, ಜಿಲ್ಲಾ ಪಂಚಾಯತ್ ಸಿಇಓ ಕುಮಾರ್, ಆರೋಗ್ಯಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಮಾರ್ಗಸೂಚಿ

  1. ನೆರೆಯ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆ ಮತ್ತು ಮಂಗಳೂರು ನಡುವಿನ ಕೆ.ಎಸ್.ಆರ್.ಟಿ.ಸಿ. ಮತ್ತು ಎಲ್ಲಾ

ಖಾಸಗಿ ಬಸ್ ಗಳ ಸಂಚಾರವನ್ನು ಸಂಪೂರ್ಣವಾಗಿ ದಿನಾಂಕ: 01-08-2021 ರಿಂದ 07-08-2021 ರವರಗೆ ನಿರ್ಬಂಧಿಸಲಾಗಿದೆ.

  1. ನೆರೆಯ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ದಿನಂಪ್ರತಿ ಪ್ರಯಾಣಿಸುವವರು, ಕಾಲೇಜು ವಿದ್ಯಾರ್ಥಿಗಳು ಕೋವಿಡ್ ಲಸಿಕೆ ಪಡೆದಿದ್ದರೂ (2 ಡೋಸ್ ಆಗಿದ್ದರೂ) 72 ಗಂಟೆಗಳ ಒಳಗೆ ಮಾಡಿಸಿರುವ RT-CR ಪರೀಕ್ಷೆಯ ನಗಟಿವ್ ವರದಿಯ ಆಧಾರದಲ್ಲಿ 7 ಅನುಮತಿಸಲಾಗುವುದು. ದಿನಗಳ ಅವಧಿಗೆ
  2. ಕೇರಳದಿಂದ / ಮಹಾರಾಷ್ಟ್ರದಿಂದ, ಇತರ ಹೊರ ರಾಜ್ಯದಿಂದ ನರ್ಸಿಂಗ್ / ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು RT PCR ಪರೀಕ್ಷೆಯ ನೆಗೆಟಿವ್ ವರದಿಯೊಂದಿಗೆ ಮಂಗಳೂರಿಗೆ ಬಂದ ಬಳಿಕ ಒಂದು ವಾರದ ಕಡ್ಡಾಯ ಕ್ವಾರಂಟೈನ್ ಗ ಒಳಪಡತಕ್ಕದ್ದು, ಏಳು ದಿನದ ಬಳಿಕ ಮತ್ತೊಮ್ಮೆ ಕೋವಿಡ್ ತಪಾಸಣೆಗೆ ಒಳಪಡತಕ್ಕದ್ದು.
  3. RT-PCR ಪರೀಕ್ಷೆಯ ನೆಗೆಟಿವ್ ವರದಿಯನ್ನು ತರದೇ ರೈಲು ಮೂಲಕ ಗಡಿ ಪ್ರವೇಶಿಸಿದ ವ್ಯಕ್ತಿಗಳು ರತ್ನ ಸ್ಟೇಷನ್ ಗಳಲ್ಲಿ ಕೋವಿಡ್ ತಪಾಸಣೆಗೆ ಒಳಪಡತಕ್ಕದ್ದು, ತಪಾಸಣೆಯ ವೇಳೆ ಪಾಸಿಟಿವ್ ಬಂದಲ್ಲಿ / ವರದಿ ಬರುವವರೆಗೆ ಕೋವಿಡ್ ಕೇರ್ ಸೆಂಟರ್ ನಲ್ಲಿ ಕ್ಯಾರಂಟೈನ್ ಆಗುವುದು ಕಡ್ಡಾಯವಾಗಿರುತ್ತದೆ. ಈ ಬಗ್ಗೆ ಸಂಬಂಧಪಟ್ಟ ತಹಶೀಲ್ದಾರರು ಶೂವಿಡ್ ಕೇರ್ ಸೆಂಟರ್ ತೆರೆಯಲು ಕ್ರಮ ವಹಿಸುವುದು,
  4. ಚೆಕ್ ಪೋಸ್ಟ್ ಗಳಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಿ 24*7 ತಪಾಸಣೆ ನಡೆಯುವ ಬಗ್ಗೆ ಸಂಬಂಧಪಟ್ಟ ಉಪ ವಿಭಾಗಧಿಕಾರಿ ಹಾಗೂ ಉಪ ಪೊಲೀಸ್ ಅಧೀಕ್ಷಕರು ಆಗಾಗ್ಗೆ ಸ್ಥಳಕ್ಕೆ ಭೇಟಿ ನೀಡಿ ಖಾತ್ರಿಪಡಿಸಿಕೊಳ್ಳತಕ್ಕದ್ದು.
  5. ವೈದ್ಯಕೀಯ ತುರ್ತು ಸೇವೆ, ಅಂಬ್ಯುಲೆನ್ಸ್ ಹಾಗೂ ಅಂತರ್ ರಾಜ್ಯ ಸರಕು ಸಾಮಾಗ್ರಿಗಳ ಸಾಗಾಟಕ್ಕೆ ಮೇಲ್ಕಂಡ

ನಿರ್ಬಂಧವು ಅನ್ವಯಿಸುವುದಿಲ್ಲ.

7. ಜಿಲ್ಲೆಯಾದ್ಯಂತ ಎಲ್ಲಾ ಸಾಮಾಜಿಕ / ರಾಜಕೀಯ / ಸಾಂಸ್ಕೃತಿಕ / ಧಾರ್ಮಿಕ ಕಾರ್ಯಕ್ರಮಗಳು |

ಸಮಾರಂಭಗಳು ಹಾಗೂ ಉತ್ಸವಗಳನ್ನು ನಿರ್ಬಂಧಿಸಲಾಗಿದೆ.

  1. ಮದುವೆಯನ್ನು ಗರಿಷ್ಟ 50 ಜನರ ಪರಿಮಿತಿಗೊಳಪಟ್ಟು ಸ್ಥಳೀಯ ಆಡಳಿತದ ಪ್ರಾಧಿಕಾರಗಳಿಂದ ಪೂರ್ವಾನುಮತಿಯೊಂದಿಗೆ ಆಯೋಜಿಸಲು ಅನುಮತಿಸಿದೆ. ಸ್ಥಳೀಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂಕಂದಾಯ ಅಧಿಕಾರಿಗಳು ಸಮಾರಂಭಕ್ಕೆ ಭೇಟಿ ನೀಡಿ ಕೋವಿಡ ನಿಯಮಾವಳಿ ಉಲ್ಲಂಘನೆ ಆಗದಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳುವುದು.
  2. ಪೂಜಾ ಸ್ಥಳಗಳಾದ ದೇವಾಲಯಗಳು, ಮಸೀದಿಗಳು, ಚರ್ಚುಗಳು, ಗುರುದ್ವಾರಗಳು ಮತ್ತು ಇತರ ಧಾರ್ಮಿಕ ಸ್ಥಳಗಳಲ್ಲಿ ಜಾತ್ರೆಗಳನ್ನು, ಧಾರ್ಮಿಕ ಉತ್ಸವಗಳು, ಮೆರವಣಿಗೆಗಳನ್ನು ನಿರ್ಬಂಧಿಸಿದೆ.
  3. ಕೋವಿಡ್ ಸಮುಚಿತ ವರ್ತನೆಯನ್ನು ಜಿಲ್ಲೆಯಾದ್ಯಂತ ಕಟ್ಟುನಿಟ್ಟಾಗಿ ಪಾಲಿಸುವುದು,
Leave A Reply

Your email address will not be published.