ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದಿಂದ ಪತ್ರಿಕಾ ದಿನಾಚರಣೆ, ಆಟಿ ಆಚರಣೆ

ಪುತ್ತೂರು : ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ಆಟಿ ಆಚರಣೆ ಜು.31ರಂದು ಬೆಳಿಗ್ಗೆ ಪುತ್ತೂರು ಮಾತೃಛಾಯಾ ಸಭಾಭವನದಲ್ಲಿ ನಡೆಯಿತು. ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಸಿಇಒ ಸಿಂಚನಾ ಊರುಬೈಲು ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ನಿವೃತ್ತ ಶಿಕ್ಷಕ ಹಾಗೂ ಬರಹಗಾರ ಶ್ರೀನಿವಾಸ್ ಎಚ್.ಬಿ.ರವರು ವಿಶೇಷ ಉಪನ್ಯಾಸ ನೀಡಿದರು.

 

ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಯೂಸುಫ್ ರೆಂಜಲಾಡಿ ಅಧ್ಯಕ್ಷತೆ ವಹಿಸಿದ್ದರು.
ಸಂಘದ ಉಪಾಧ್ಯಕ್ಷೆ ಶೈಲಜಾ ಸುದೇಶ್ ಸ್ವಾಗತಿಸಿದರು. ಕಾರ್ಯದರ್ಶಿ ಲಕ್ಷ್ಮಿಕಾಂತ್ ರೈ ಅನಿಕೂಟೇಲು ಕಾರ್ಯಕ್ರಮ ನಿರೂಪಿಸಿದರು. ಸದಸ್ಯ ತಿಲಕ್ ರೈ ಕುತ್ಯಾಡಿ ವಂದಿಸಿದರು. ಬಳಿಕ ಆಟಿ ವಿಶೇಷ ತಿನಿಸುಗಳ ಉಪಹಾರ ವ್ಯವಸ್ಥೆ ಮಾಡಲಾಗಿತು.ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Leave A Reply

Your email address will not be published.