ಫೈನಾನ್ಸ್ ಒಳಗಡೆ ಫೈನಾನ್ಸಿಯರ್ ಹತ್ಯೆ | ಬೆಚ್ಚಿಬಿದ್ದ ಕರಾವಳಿ

ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಸಲ್ವಾಡಿ ಎಂಬಲ್ಲಿ ಫೈನಾನ್ಸ್ ಮಾಲೀಕನನ್ನು ತಡರಾತ್ರಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದು ಪರಾರಿಯಾದ ಘಟನೆ ನಡೆದಿದೆ.

 

ಅಜೇಂದ್ರ ಶೆಟ್ಟಿ (33) ಕೊಲೆಗೀಡಾದ ಫೈನಾನ್ಸ್ ಮಾಲೀಕ ಎಂದು ತಿಳಿದುಬಂದಿದೆ

ಕುಂದಾಪುರದ ತಾಲೂಕಿನ ಕಂಡ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಸಳ್ವಾಡಿಯಲ್ಲಿ ತಡರಾತ್ರಿ ಡ್ರೀಮ್ ಫೈನಾನ್ಸ್ ನ ಫೈನಾನ್ಶಿಯರ್ ಕೊಲೆಯಾಗಿದೆ. ಯಡಾಡಿ ಮತ್ಯಾಡಿ ಕೂಡಲ್ ನಿವಾಸಿಯಾಗಿರುವ ಅಜೇಂದ್ರ ಶೆಟ್ಟಿ ತಡರಾತ್ರಿಯವರೆಗೆ ಮನೆಗೆ ವಾಪಾಸ್ಸಾಗಿರಲಿಲ್ಲ. ಮನೆಯವರು ಹುಡುಕಾಟ ಪ್ರಾರಂಭಿಸಿದ್ದಾರೆ, ನಂತರ ಎಲ್ಲೂ ಕಾಣಿಸದಿದ್ದಾಗ ಆತನ ಸ್ನೇಹಿತರು ಫೈನಾನ್ಸ್ ಗೆ ಹೋಗಿದ್ದಾರೆ. ಆ ವೇಳೆ ಫೈನಾನ್ಸ್ ಒಳಗೆ ಬರ್ಬರವಾಗಿ ಕೊಲೆಯಾದ ಸ್ಥಿತಿಯಲ್ಲಿ ಅಜೇಂದ್ರ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ಏಳು ವರ್ಷಗಳಿಂದ ಸಳ್ವಾಡಿಯಲ್ಲಿ ಅಜೇಂದ್ರ ಫೈನಾನ್ಸ್ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ವ್ಯವಹಾರ ವಿಚಾರದಲ್ಲಿ ನಡೆದಿರುವ ಕೊಲೆಯೆಂದು ಮೇಲ್ನೋಟಕ್ಕೆ ಅಂದಾಜಿಸಲಾಗಿದೆ. ಕೊಲೆಯ ಹಿಂದಿನ ಕಾರಣ ಪೊಲೀಸ್ ತನಿಖೆಯಿಂದ ಬೆಳಕಿಗೆ ಬರಬೇಕಾಗಿದೆ.

ಕರಾವಳಿಯಲ್ಲಿ ಇತ್ತೀಚಿನ ದಿನಗಳಲ್ಲಿ ಒಂದಾದ ಮೇಲೆ ಒಂದು ಕೊಲೆ ಪ್ರಕರಣಗಳು ನಡೆಯುತ್ತಿದೆ. ಅಪರಾಧ ಕೃತ್ಯ ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಮನೆಮಾಡಿದೆ.

ಕುಂದಾಪುರ ಗ್ರಾಮಾಂತರ ಕಂಡ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Leave A Reply

Your email address will not be published.