ಕರ್ನಾಟಕ ಸೇರಿದಂತೆ ದೇಶದಲ್ಲಿವೆ 24 ನಕಲಿ ವಿಶ್ವವಿದ್ಯಾಲಯಗಳು | ಮಾಹಿತಿ ನೀಡಿದ ಯುಜಿಸಿ

ಕರ್ನಾಟಕದ ಒಂದು ವಿಶ್ವ ವಿದ್ಯಾಲಯ ಸೇರಿದಂತೆ ದೇಶದಲ್ಲಿ 24 ನಕಲಿ ವಿಶ್ವವಿದ್ಯಾಲಯಗಳನ್ನು ಗುರುತಿಸಲಾಗಿದೆ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಮಾಹಿತಿ ನೀಡಿದೆ.

ಲೋಕಸಭೆಯಲ್ಲಿ ಲಿಖಿತ ಪ್ರಶ್ನೆಗೆ ಉತ್ತರವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಈ ಬಗ್ಗೆ ಮಾಹಿತಿ ನೀಡಿದ್ದು, ‘ಯುಜಿಸಿ 24 ಸ್ವಯಂ ಘೋಷಿತ ಶಿಕ್ಷಣ ಸಂಸ್ಥೆಗಳನ್ನು ನಕಲಿ ಎಂದು ಘೋಷಿಸಿದೆ ಮತ್ತು ನಿಯಮಗಳನ್ನು ಉಲ್ಲಂಘಿಸಿದ ಇನ್ನೂ ಎರಡು ಸಂಸ್ಥೆಗಳನ್ನು ಪತ್ತೆ ಮಾಡಿದೆ. ವಿದ್ಯಾರ್ಥಿಗಳು, ಪೋಷಕರು, ಸಾಮಾನ್ಯ ಜನರು ಮತ್ತು ವಿದ್ಯುನ್ಮಾನ ಮುದ್ರಣ ಮಾಧ್ಯಮದ ಮೂಲಕ ಪಡೆದ ದೂರುಗಳ ಆಧಾರದ ಮೇಲೆ, ಯುಜಿಸಿ 24 ಸಂಸ್ಥೆಗಳನ್ನು ನಕಲಿ ವಿಶ್ವವಿದ್ಯಾಲಯಗಳೆಂದು ಘೋಷಿಸಿದೆ’ ಎಂದು ಹೇಳಿದರು.

ಈ 24 ನಕಲಿ ಶಿಕ್ಷಣ ಸಂಸ್ಥೆಗಳಲ್ಲಿ ಕರ್ನಾಟಕದ ಬಡಗನ್ವಿ ಸರ್ಕಾರ್ ವರ್ಲ್ಡ್ ಓಪನ್ ಯೂನಿವರ್ಸಿಟಿ ಎಜುಕೇಶನ್ ಸೊಸೈಟಿ ಕೂಡ ಒಂದಾಗಿದೆ. ಇದು ಬೆಳಗಾವಿಯ ಗೋಕಾಕ್ ನಲ್ಲಿ ಇದೆ.

Ad Widget


Ad Widget


Ad Widget

Ad Widget


Ad Widget

ದೆಹಲಿಯಲ್ಲಿ ಇಂತಹ ಏಳು ನಕಲಿ ವಿಶ್ವವಿದ್ಯಾಲಯಗಳಿದ್ದು, ಕಮರ್ಷಿಯಲ್ ಯೂನಿವರ್ಸಿಟಿ ಲಿಮಿಟೆಡ್, ಯುನೈಟೆಡ್ ನೇಷನ್ಸ್ ಯೂನಿವರ್ಸಿಟಿ, ವೊಕೇಷನಲ್ ಯೂನಿವರ್ಸಿಟಿ, ಎಡಿಆರ್ ಸೆಂಟ್ರಿಕ್ ಜುರಿಡಿಕಲ್ ವಿಶ್ವವಿದ್ಯಾಲಯ, ಇಂಡಿಯನ್ ಇನ್ ಸ್ಟಿಟ್ಯೂಷನ್ ಆಫ್ ಸೈನ್ಸ್ ಅಂಡ್ ಎಂಜಿನಿಯರಿಂಗ್, ವಿಶ್ವಕರ್ಮ ಓಪನ್ ಯೂನಿವರ್ಸಿಟಿ ಫಾರ್ ಸೆಲ್ಫ್ ಎಂಪ್ಲಾಯ್ ಮೆಂಟ್, ಮತ್ತು ಅಧ್ಯತ್ಮಿಕ್ ವಿಶ್ವವಿದ್ಯಾಲಯ (ಆಧ್ಯಾತ್ಮಿಕ ವಿಶ್ವವಿದ್ಯಾಲಯ) ನಕಲಿ ವಿವಿಗಳು ಎಂದು ಘೋಷಿಸಲಾಗಿದೆ.

ಅಂತೆಯೇ ಉತ್ತರ ಪ್ರದೇಶವು ಎಂಟು ನಕಲಿ ವಿಶ್ವವಿದ್ಯಾಲಯಗಳನ್ನು ಹೊಂದಿದೆ. ಈ ಪೈಕಿ ವಾರಣಾಸಿಯ ಸಂಸ್ಕೃತ ವಿಶ್ವವಿದ್ಯಾಲಯ; ಮಹಿಳಾ ಗ್ರಾಮ ವಿದ್ಯಾಪೀಠ, ಅಲಹಾಬಾದ್; ಗಾಂಧಿ ಹಿಂದಿ ವಿದ್ಯಾಪೀಠ, ಅಲಹಾಬಾದ್; ನ್ಯಾಷನಲ್ ಯೂನಿವರ್ಸಿಟಿ ಆಫ್ ಎಲೆಕ್ಟ್ರೋ ಕಾಂಪ್ಲೆಕ್ಸ್ ಹೋಮಿಯೋಪತಿ, ಕಾನ್ಪುರ; ನೇತಾಜಿ ಸುಭಾಷ್ ಚಂದ್ರ ಬೋಸ್ ಮುಕ್ತ ವಿಶ್ವವಿದ್ಯಾಲಯ, ಅಲಿಘರ್; ಉತ್ತರ ಪ್ರದೇಶ ವಿಶ್ವವಿದ್ಯಾಲಯ, ಮಥುರಾ; ಮಹಾರಾಣಾ ಪ್ರತಾಪ್ ಶಿಕ್ಷಾ ನಿಕೇತನ ವಿಶ್ವವಿದ್ಯಾಲಯ, ಪ್ರತಾಪಘರ್ ಮತ್ತು ಇಂದ್ರಪ್ರಸ್ಥ ಶಿಕ್ಷಾ ಪರಿಷತ್, ನೋಯ್ಡಾ ಇವುಗಳನ್ನು ನಕಲಿ ವಿವಿಗಳೆಂದು ಗುರುತಿಸಲಾಗಿದೆ.

ಒಡಿಶಾ ಮತ್ತು ಪಶ್ಚಿಮ ಬಂಗಾಳಗಳಲ್ಲಿ ತಲಾ ಎರಡು ವಿಶ್ವವಿದ್ಯಾಲಯಗಳಿದ್ದು, ಈ ಪೈಕಿ ಕೋಲ್ಕತ್ತಾದ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ ಮೆಡಿಸಿನ್ ಮತ್ತು ಕೋಲ್ಕತ್ತಾದ ಇನ್ ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ ಮೆಡಿಸಿನ್ ಅಂಡ್ ರಿಸರ್ಚ್ ಮತ್ತು ರೂರ್ಕೆಲಾದ ನವಭಾರತ್ ಶಿಕ್ಷಾ ಪರಿಷತ್ ಮತ್ತು ಉತ್ತರ ಒರಿಸ್ಸಾ ಕೃಷಿ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯಗಳು ನಕಲಿ ಎನ್ನಲಾಗಿದೆ.

ಕರ್ನಾಟಕ, ಕೇರಳ, ಮಹಾರಾಷ್ಟ್ರ, ಪುದುಚೇರಿ ಮತ್ತು ಮಹಾರಾಷ್ಟ್ರಗಳಲ್ಲಿ ತಲಾ ಒಂದು ನಕಲಿ ವಿಶ್ವವಿದ್ಯಾಲಯವಿದ್ದು, ಅವುಗಳೆಂದರೆ – ಪುದುಚೇರಿಯ ಶ್ರೀ ಬೋಧಿ ಅಕಾಡೆಮಿ ಆಫ್ ಹೈಯರ್ ಎಜುಕೇಶನ್; ಕ್ರೈಸ್ಟ್ ಟೆಸ್ಟಮೆಂಟ್ ಡೀಮ್ಡ್ ವಿಶ್ವವಿದ್ಯಾಲಯ, ಆಂಧ್ರಪ್ರದೇಶ; ರಾಜಾ ಅರೇಬಿಕ್ ವಿಶ್ವವಿದ್ಯಾಲಯ, ನಾಗ್ಪುರ; ಸೇಂಟ್ ಜಾನ್ಸ್ ವಿಶ್ವವಿದ್ಯಾಲಯ, ಕೇರಳ ಮತ್ತು ಬಡಗನ್ವಿ ಸರ್ಕಾರ್ ವರ್ಲ್ಡ್ ಓಪನ್ ಯೂನಿವರ್ಸಿಟಿ ಎಜುಕೇಶನ್ ಸೊಸೈಟಿ, ಕರ್ನಾಟಕ ಎಂದು ಗುರುತಿಸಲಾಗಿದೆ.

ಇದಲ್ಲದೆ ದೆಹಲಿಯ ಕುತುಬ್ ಎನ್ ಕ್ಲೇವ್ ನ ಭಾರತೀಯ ಶಿಕ್ಷಣ ಪರಿಷತ್, ಉತ್ತರ ಪ್ರದೇಶದ ಲಖನೌನಲ್ಲಿರುವ ಭಾರತೀಯ ಯೋಜನೆ ಮತ್ತು ನಿರ್ವಹಣಾ ಸಂಸ್ಥೆ (ಐಐಪಿಎಂ) ಎಂಬ ಇನ್ನೆರಡು ಸಂಸ್ಥೆಗಳು ಯುಜಿಸಿ ಕಾಯ್ದೆ, 1956ರ ಉಲ್ಲಂಘನೆಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದಿದೆ.

ಇದೇ ವೇಳೆ ನಕಲಿ ಅಥವಾ ಮಾನ್ಯತೆ ಪಡೆಯದ ವಿಶ್ವವಿದ್ಯಾಲಯಗಳ ವಿರುದ್ಧ ಯುಜಿಸಿ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದ ಪ್ರಧಾನ್, ‘ರಾಷ್ಟ್ರೀಯ ಹಿಂದಿ ಮತ್ತು ಇಂಗ್ಲಿಷ್ ಪತ್ರಿಕೆಗಳಲ್ಲಿ ನಕಲಿ ವಿಶ್ವವಿದ್ಯಾಲಯಗಳು/ಸಂಸ್ಥೆಗಳ ಪಟ್ಟಿಯ ಬಗ್ಗೆ ಯುಜಿಸಿ ಸಾರ್ವಜನಿಕ ನೋಟಿಸ್ ನೀಡುತ್ತದೆ. ಆಯೋಗವು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಇರುವಂತಹ ವಿಶ್ವವಿದ್ಯಾಲಯಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಗಳು, ಶಿಕ್ಷಣ ಕಾರ್ಯದರ್ಶಿಗಳು ಮತ್ತು ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರಗಳನ್ನು ಬರೆಯುತ್ತದೆ’ ಎಂದು ಅವರು ಹೇಳಿದರು.

Leave a Reply

Ad Widget >>^
Ad Widget
error: Content is protected !!
Scroll to Top
%d bloggers like this: