ಮಾಜಿ ಉಳ್ಳಾಲ ಶಾಸಕ ಇದಿನಬ್ಬ ಪುತ್ರನ ಮನೆಗೆ ಎನ್‌ಐಎ ದಾಳಿ | ಐಸಿಸ್ ಜತೆ ಸಂಪರ್ಕದ ಶಂಕೆ

ಉಳ್ಳಾಲದ ಮಾಜಿ ಶಾಸಕ ಬಿ.ಎಂ.ಇದಿನಬ್ಬ ಅವರ ಪುತ್ರನ ಮನೆಗೆ ಇಂದು ಬೆಳ್ಳಂಬೆಳಗ್ಗೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉಗ್ರ ಸಂಘಟನೆ ಜತೆ ನಂಟು ಇರುವ ಶಂಕೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.

ಬೆಂಗಳೂರಿನಿಂದ ಆಗಮಿಸಿದ ಅಧಿಕಾರಿಗಳು ಮನೆಗೆ ಬಂದು ತನಿಖೆ ಆರಂಭಿಸಿದ್ದಾರೆ. ಮನೆಯಲ್ಲಿ ಇದಿನಬ್ಬ ಅವರ ಪುತ್ರ ಬಿ.ಎಂ. ಬಾಷಾ ಎಂಬವರು ತಮ್ಮ ಕುಟುಂಬದ ಜತೆ ವಾಸವಾಗಿದ್ದಾರೆ. ಸಿರಿ ಮೂಲದ ಐಸಿಸ್ ಉಗ್ರ ಸಂಘಟನೆ ಜತೆ ನಂಟು ಇದೆ ಎಂಬ ಕಾರಣಕ್ಕೆ ದಾಳಿ ನಡೆದಿದೆ ಎನ್ನಲಾಗುತ್ತಿದೆ.

ನಾಲ್ಕು ಕಾರುಗಳಲ್ಲಿ 25 ಮಂದಿಯಿದ್ದ ತಂಡ ಉಳ್ಳಾಲರ ಮಾಸ್ತಿಕಟ್ಟೆಗೆ ಆಗಮಿಸಿದೆ. ಎನ್‌ಐಎ ಜತೆಗೆ ಮಂಗಳೂರಿನ ಸ್ಥಳೀಯ ಪೊಲೀಸರು ಕೂಡ ಭದ್ರತೆ ಒದಗಿಸಿದ್ದಾರೆ.

Ad Widget
Ad Widget

Ad Widget

Ad Widget

ಇದಿನಬ್ಬ ಪುತ್ರ ಬಿ.ಎಂ. ಬಾಷಾ ಮಂಗಳೂರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು. ಇವರ ಪುತ್ರರು ವಿದೇಶದಲ್ಲಿದ್ದಾರೆ. ಇವರ ಕುಟುಂಬದವರು ಐಸಿಸ್ ಸಂಬಂಧಿಸಿದ ಯೂಟ್ಯೂಬ್ ಚಾನೆಲ್‌ಗಳನ್ನು ಸಬ್ಸ್ಕ್ರೈಬ್ ಮಾಡಿ, ಮೃದುಧೋರಣೆ ಅನುಸರಿಸಿದ್ದರು ಎನ್ನಲಾಗಿದೆ.

ಅಲ್ಲದೆ, ಐಸಿಸ್ ಸಂಪರ್ಕ ಮತ್ತು ಜಮ್ಮು ಕಾಶ್ಮೀರದ ಉಗ್ರ ಸಂಘಟನೆಯ ಯುವಕರ ಜತೆ ಮೊಬೈಲ್ ಸಂಪರ್ಕ ಇರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ಎನ್‌ಐಎ ವಿಭಾಗದ ಡಿಐಜಿ ಶ್ರೇಣಿಯ ಅಧಿಕಾರಿ ಉಮಾ ಎಂಬವರ ನೇತೃತ್ವದಲ್ಲಿ ದಾಳಿ ನಡೆದಿದೆ.

ಹಲವು ವರ್ಷಗಳ ಹಿಂದೆ ಇದಿನಬ್ಬ ಅವರ ಪುತ್ರಿಯೊಬ್ಬಳು ಕೇರಳದಲ್ಲಿ ನಾಪತ್ತೆಯಾಗಿದ್ದು, ಐಸಿಸ್ ಸಂಘಟನೆ ಸೇರಿದ್ದಾಗಿ ಹೇಳಲಾಗಿತ್ತು.

Leave a Reply

error: Content is protected !!
Scroll to Top
%d bloggers like this: