ಸುಳ್ಯ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ಯೋಜನೆ,ಜನತೆಯ ನಿರೀಕ್ಷೆಗೆ ತಕ್ಕಂತೆ ಕೆಲಸ-ಸಚಿವ ಎಸ್.ಅಂಗಾರ

ಸುಳ್ಯ : ಸುಳ್ಯ ವಿಧಾನ ಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ತರಲಾಗುವುದು,ಕ್ಷೇತ್ರದ ಜನರ ವಿಶ್ವಾಸಕ್ಕೆ ಹಾಗೂ ಪಕ್ಷದ ನಿರೀಕ್ಷೆಗೆ ತಕ್ಕಂತೆ ಕೆಲಸ ನಿರ್ವಹಿಸುತ್ತೇನೆ ಎಂದು ಸಚಿವ ಎಸ್.ಅಂಗಾರ ಹೇಳಿದ್ದಾರೆ.

 

ಎರಡನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು,ಸುಳ್ಯ ಕ್ಷೇತ್ರದಲ್ಲಿ ಈಗಾಗಲೇ ಸೇತುವೆ, ರಸ್ತೆ ಸೇರಿದಂತೆ ಮೂಲ ಸೌಕರ್ಯ ಒದಗಣನೆಗೆ ಸಾಕಷ್ಟು ಅನುದಾನ ನೀಡಲಾಗಿದೆ. ಇನ್ನೂ ಬೇಡಿಕೆಗಳಿವೆ. ಹಿಂದಿನ ಅವಧಿಯಲ್ಲಿ ಕೆಲಸ ನಿರ್ವಹಿಸಿರುವ ತೃಪ್ತಿ ಇದೆ. ಮಾದರಿ ಆಡಳಿತ ನೀಡುವಲ್ಲಿ ಸಹಕಾರ ನೀಡುತ್ತೇನೆ ಎಂದ ಅವರು, ಮುಖ್ಯಮಂತ್ರಿಗಳು ಯಾವುದೇ ಖಾತೆ ಕೊಟ್ಟರೂ ಅದಕ್ಕೆ ನ್ಯಾಯ ಒದಗಿಸುವುದು ನನ್ನ ಜವಾಬ್ದಾರಿ. ಅದನ್ನು ಅತ್ಯಂತ ಪ್ರಾಮಾಣಿಕತೆ, ನಿಷ್ಠೆಯಿಂದ ಮಾಡುತ್ತೇನೆ ಎಂದು ಅಂಗಾರ ಹೇಳಿದರು.

ಖಾತೆ ಹಂಚಿಕೆಯಾದ ಬಳಿಕ ಅದರ ನಿರ್ವಹಣೆ ನಿಟ್ಟಿನಲ್ಲಿ ಯೋಜನೆ ರೂಪಿಸುತ್ತೇನೆ. ನನಗೆ ವಹಿಸಿಕೊಡುವ ಖಾತೆಯಲ್ಲಿ ಜನರಿಗೆ ಹೇಗೆ ಸ್ಪಂದಿಸಬಹುದು ಎನ್ನುವ ಬಗ್ಗೆ ಯೋಜನೆ ರೂಪಿಸಿ ಕಾರ್ಯನ್ಮುಖನಾಗುತ್ತೇನೆ ಎಂದರು.

Leave A Reply

Your email address will not be published.