ಕಡಬ ಕಾಲೇಜಿಗೆ ತೆರಳಿದ ಯುವತಿ ನಾಪತ್ತೆ

ಕಡಬ: ಕಡಬ ಸಮೀಪದ ಕಳಾರ ಎಂಬಲ್ಲಿ ಮನೆಯಿಂದ ಕಾಲೇಜಿಗೆ ತೆರಳಿದ ವಿದ್ಯಾರ್ಥಿನಿಯೋರ್ವಳು ಮನೆಗೆ ವಾಪಸ್ಸಾಗದೆ ನಾಪತ್ತೆಯಾಗಿರುವ ಬಗ್ಗೆ ಕಡಬ ಠಾಣೆಯಲ್ಲಿ ದೂರು ದಾಖಲಾಗಿದೆ. .

ಕಳಾರ ನಿವಾಸಿ ಹದಿನೇಳು ವರ್ಷದ ಯುವತಿಯು ಗುರುವಾರದಂದು ಕಾಲೇಜಿಗೆಂದು ಮನೆಯಿಂದ ತೆರಳಿದ್ದು, ಸಂಜೆಯವರೆಗೂ ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಸಂಬಂಧಿಕರ ಮನೆಯಲ್ಲೆಲ್ಲಾ ಹುಡಿಕಾಡಿದ ಆಕೆಯ ಮನೆಯವರು ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಶುಕ್ರವಾರ ಕಡಬ ಠಾಣೆಗೆ ದೂರು ನೀಡಿದ್ದಾರೆ.

Leave a Reply

Ad Widget >>^
Ad Widget
error: Content is protected !!
Scroll to Top
%d bloggers like this: