ನಾಳೆಯೇ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ರಾಜ್ಯ ಎಸ್ಎಸ್ಎಲ್‌ಸಿ ಫಲಿತಾಂಶ ನಾಳೆಯೇ ಪ್ರಕಟಿಸುವುದಾಗಿ ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

 

ಈಗಾಗಲೇ ಮೌಲ್ಯಮಾಪನ ಪೂರ್ಣಗೊಂಡಿದ್ದು, ಫಲಿತಾಂಶ ಪ್ರಕಟಿಸುವುದಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ. ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ ಅವರಿಗೆ ಎಸ್ಎಸ್ಎಲ್‌ಸಿ ಬೋರ್ಡ್ ನಿರ್ದೇಶಕಿ ವಿ.ಸುಮಂಗಲ ನಿನ್ನೆಯೇ ಫಲಿತಾಂಶ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆ ಚರ್ಚಿಸಿ
ನಾಳೆಯೇ SSLC ಫಲಿತಾಂಶ ಪ್ರಕಟ ಮಾಡಲು ನಿರ್ಧಾರ ಕೈಗೊಳ್ಳಲಾಗಿದ್ದು, ಈಗಾಗಲೇ ಪರೀಕ್ಷೆ ಮೌಲ್ಯಮಾಪನ ಮುಕ್ತಾಯಗೊಂಡಿರುವ ಕಾರಣ ತ್ವರಿತವಾಗಿ ಫಲಿತಾಂಶ ಪ್ರಕಟಿಸುವುದು ಉತ್ತಮ ಎಂದು ಚರ್ಚಿಸಿರುವ ಮಾಹಿತಿ ಲಭ್ಯವಾಗಿದೆ.

ಫಲಿತಾಂಶ ಪ್ರಕಟವಾದ ನಂತರ ಎಸ್‌ಎಸ್‌ಎಲ್‌ಸಿ ಫಲಿತಾಂಶ ವೀಕ್ಷಿಸಲು ಹೀಗೆ ಮಾಡಿ :

*ಕರ್ನಾಟಕ ಸರ್ಕಾರದ ಅಧಿಕೃತ ವೆಬ್‌ಸೈಟ್
sslc.karnataka.gov.in ಕ್ಲಿಕ್ ಮಾಡಿ

*ಸ್ಕ್ರೀನ್‌ನಲ್ಲಿ ರಿಸಲ್ಟ್ಸ್ ಲಿಂಕ್ ಕಾಣಿಸಿಕೊಳ್ಳುತ್ತದೆ. ಆ ಲಿಂಕ್ ಅನ್ನು ಕ್ಲಿಕ್ ಮಾಡಿ

*ನಿಮ್ಮ ರೋಲ್ ನಂಬರ್ ಅನ್ನು ಹಾಕಿ ಲಾಗಿನ್ ಆಗಿ

*ರೋಲ್ ನಂಬರ್ ಜೊತೆಗೆ ಅಲ್ಲಿ ಕೇಳುವ ನಿಮ್ಮ ಇತರೆ ಮಾಹಿತಿಗಳನ್ನೂ ತುಂಬಿರಿ

*ಫಲಿತಾಂಶವನ್ನು ವೀಕ್ಷಿಸಲು ಸಬ್ಮಿಟ್ ಆಯ್ಕೆಯನ್ನು ಕ್ಲಿಕ್ ಮಾಡಿ

ಜುಲೈ 19 ಹಾಗು 22 ರಂದು ಎರಡು ದಿನಗಳ ಕಾಲ ಎಸ್ಎಸ್ಎಲ್‌ಸಿ ಪರೀಕ್ಷೆ ನಡೆದಿದ್ದು, 99.65% ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಕೊರೊನಾ ಆತಂಕದ ನಡುವೆಯೂ ರಾಜ್ಯದಲ್ಲಿ ಈ ವರ್ಷ 8,19,694 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದಾರೆ.

1 Comment
  1. nithushetty says

    6 ಬಾರಿಯಲ್ಲ. 8 ಬಾರಿ ಭಾರತ ತಂಡ ಒಲಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದಿದೆ. ತಿದ್ದುಪಡಿ ಮಾಡಿಕೊಳ್ಳಿ.

Leave A Reply

Your email address will not be published.