ಬಿಜೆಪಿ,ಸಂಘ ಪರಿವಾರದ ಕಾರ್ಯಕರ್ತರ ಮೇಲಿನ ಸುಳ್ಳು ದೂರು ಹಿಂಪಡೆಯುವಂತೆ ಗೃಹ ಸಚಿವರಿಗೆ ಕೋಟ ಮನವಿ

ಬಿಜೆಪಿ ಮತ್ತು ಹಿಂದೂಪರ ಸಂಘ ಪರಿವಾರದ ಕಾರ್ಯಕರ್ತರ ಮೇಲಿನ ದುರುದ್ದೇಶ ಪೂರ್ವಕ ಹಾಗೂ ಸುಳ್ಳು ಪ್ರಕರಣಗಳ ಮೊಕದ್ದಮೆಗಳನ್ನು ಹಿಂಪಡೆಯುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಕೋಟ ಶ್ರೀನಿವಾಸ ಅವರು ಮನವಿ ಮಾಡಿದ್ದಾರೆ.

 

ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗಳೂ ಸೇರಿದಂತೆ ರಾಜ್ಯದಾದ್ಯಂತ ಅನೇಕ ಕಡೆಗಳಲ್ಲಿ ಬಿಜೆಪಿ ಮತ್ತು ಹಿಂದೂಪರ ಸಂಘ ಪರಿವಾರದ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಸಮಾಜದ ಕೆಲವೊಂದು ಪಟ್ಟಭದ್ರ ಹಿತಾಸಕ್ತಿಗಳು ಸೇರಿ ದುರುದ್ದೇಶ ಪೂರ್ವಕವಾಗಿ ಸುಳ್ಳು ಪ್ರಕರಣಗಳು ದಾಖಲಾಗಿರುತ್ತವೆ.
ಈ ರೀತಿಯ ದುರುದ್ದೇಶದ ಸುಳ್ಳು ಪ್ರಕರಣಗಳನ್ನು ಹಿಂಪಡೆಯುವಂತೆ ಕಾರ್ಯಕರ್ತರುಗಳು ಮನವಿ ಸಲ್ಲಿಸಿರುತ್ತಾರೆ.

ಈ ಹಿನ್ನೆಲೆಯಲ್ಲಿ, ರಾಜ್ಯದಾದ್ಯಂತ ಬಿಜೆಪಿ ಹಾಗೂ ಹಿಂದೂಪರ ಸಂಘ ಪರಿವಾರದ ಕಾರ್ಯಕರ್ತರ ವಿರುದ್ಧ ದುರುದ್ದೇಶ ಪೂರ್ವಕವಾಗಿ ದಾಖಲಸಲಾಗಿರುವ ಮೊಕದ್ದಮೆಗಳನ್ನು ಹಿಂಪಡೆಯುವಂತೆ ಕೋರಿದ್ದಾರೆ

Leave A Reply

Your email address will not be published.