ಮೊದಲ ಬಾರಿಗೆ ದಾಖಲೆಯ ಎಸ್ಎಸ್ಎಲ್ ಸಿ ಫಲಿತಾಂಶ | ಈ ಬಾರಿ ಒಬ್ಬ ವಿದ್ಯಾರ್ಥಿಯನ್ನು ಬಿಟ್ಟು, ಉಳಿದೆಲ್ಲರೂ ಪಾಸ್

ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಬಿಡುಗಡೆ ಮಾಡಿದ್ದಾರೆ.

ಇದೇ ಮೊದಲ ಬಾರಿಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.99.99ರಷ್ಟು ಫಲಿತಾಂಶ ರಾಜ್ಯದಲ್ಲಿ ದಾಖಲಾಗಿದೆ.

ಎ + ಗ್ರೇಡ್ 1,28,931, ಎ ಗ್ರೇಡ್ 2,50,317, ಬಿ ಗ್ರೇಡ್ 2,87,684, ಸಿ ಗ್ರೇಡ್ 1,13,610 ವಿದ್ಯಾರ್ಥಿಗಳು ಪಡೆದಿದ್ದಾರೆ. ಶೇ.9 ರಷ್ಟು ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ ನೀಡಿ ಪಾಸ್ ಮಾಡಲಾಗಿದೆ.

157 ವಿದ್ಯಾರ್ಥಿಗಳು 625/625 ಅಂಕಗಳನ್ನು ಪಡೆದಿದ್ದಾರೆ.

ರಾಜ್ಯದಲ್ಲಿ ಬೆಂಗಳೂರು ಉತ್ತರ ಪ್ರಥಮ ಸ್ಥಾನ, ಬೆಂಗಳೂರು ದಕ್ಷಿಣ ದ್ವಿತೀಯ ಸ್ಥಾನ, ರಾಮನಗರ ಜಿಲ್ಲೆ ತೃತೀಯ ಸ್ಥಾನ ಪಡೆದಿದೆ. ಈ ಬಾರಿ ಬಳ್ಳಾರಿ ಕೊನೆಯ ಸ್ಥಾನ ಪಡೆದಿದೆ.

ಕೋವಿಡ್ ಕಾರಣದಿಂದ ಈ ಬಾರಿ ವಿಶಿಷ್ಟ ರೀತಿಯಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸಲಾಗಿತ್ತು. ಮೂರು ವಿಷಯಗಳನ್ನೊಳಗೊಂಡ ಒಂದು ಪತ್ರಿಕೆಯಂತೆ ಒಟ್ಟು ಎರಡು ದಿನ ಪರೀಕ್ಷೆ ನಡೆಸಲಾಗಿತ್ತು.

ಪರೀಕ್ಷೆ ಬರೆದಿರುವ ಎಲ್ಲರನ್ನೂ ಉತ್ತೀರ್ಣಗೊಳಿಸುವುದಾಗಿ ಸರ್ಕಾರ ಈಗಾಗಲೇ ಘೋಷಣೆ ಮಾಡಿತ್ತು. ಅಂಕ ಆಧಾರಿತ ಫಲಿತಾಂಶ ಇಂದು ಪ್ರಕಟವಾಗಿದೆ. ಈ ಬಾರಿ ಒಟ್ಟು 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

Leave A Reply

Your email address will not be published.