ಇಂದಿನಿಂದ ಜಿಲ್ಲೆಯಾದ್ಯಂತ ಬಾಗಿಲು ಮುಚ್ಚಲಿವೆ ರೆಕ್ರಿಯೇಷನ್ ಕ್ಲಬ್ | ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಆದೇಶ

ಮಂಗಳೂರು: ದ.ಕ.ಜಿಲ್ಲೆಯಾದ್ಯಂತ ಮಹಾಮಾರಿ ವ್ಯಾಪಕವಾಗಿ ಹರಡಿದ್ದು,ಈಗಾಗಲೇ ಸರ್ಕಾರ ವಾರಂತ್ಯ ಕರ್ಫ್ಯೂ ನ್ನು ಜಾರಿಗೊಳಿಸಿದೆ.ಆದರೆ ಇದೀಗ ಜಿಲ್ಲೆಯಲ್ಲಿ ಸಕ್ರಿಯವಾಗಿರುವ ರಿಕ್ರಿಯೇಷನ್ ಕ್ಲಬ್‌ಗಳನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

 

ಕೋವಿಡ್ ನಿಂದಾಗಿ ಜನತೆ ಜಾಗ್ರತೆವಹಿಸುವುದು ತುಂಬಾ ಅವಶ್ಯವಾಗಿದ್ದು,ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಪ್ರಕರಣವೂ ಹೆಚ್ಚುತ್ತಲೇ ಇವೆ. ಈ ಕಾರಣದಿಂದ ಸಾರ್ವಜನಿಕರ ಮೇಲಿನ ಕಾಳಜಿಯಿಂದ ಜಿಲ್ಲೆಯಲ್ಲಿನ ರಿಕ್ರಿಯೇಷನ್ ಕ್ಲಬ್‌ಗಳಲ್ಲಿ ಹೆಚ್ಚಿನ ಜನ ಸೇರುವುದರಿಂದ, ಸಾಮಾಜಿಕ ಅಂತರ ಕಾಯ್ದು ಕೊಳ್ಳುವಲ್ಲಿ ವಿಫಲವಾಗುತ್ತಿರುವ ಕಾರಣದಿಂದಾಗಿ ಕ್ಲಬ್ ಗಳಿಗೆ ಬಾಗಿಲು ಮುಚ್ಚುವಂತೆ ನಿಯಮ ಜಾರಿಯಾಗಿದೆ.

ಕ್ಲಬ್ ಗಳಲ್ಲಿ ಇಸ್ಪೀಟ್ ಕಾರ್ಡ್ ಆಟವಾಡುವ ವೇಳೆ, ಕಾರ್ಡ್‌ಗಳನ್ನು ಒಬ್ಬರು ಮತ್ತೊಬ್ಬರಿಗೆ ನೀಡುವ ಸಂದರ್ಭ ಕೋವಿಡ್ ಸೋಂಕು ಸಾಂಕ್ರಾಮಿಕವಾಗಿ ಹರಡುವ ಸಾಧ್ಯತೆಗಳು ಹೆಚ್ಚಾಗಿರುವುದು ಕಂಡು ಬಂದಿದೆ.

Leave A Reply

Your email address will not be published.