ಸರ್ಕಾರಿ ಕಾರ್ಯಕ್ರಮಗಳಲ್ಲಿ ಇನ್ನು ಹೂಗುಚ್ಚ, ಹಾರ, ತುರಾಯಿ, ನೆನಪಿನ ಕಾಣಿಕೆಗಳಿಗೆ ಬ್ರೇಕ್

ಇನ್ನು ಮುಂದೆ ಸರ್ಕಾರದ ಸಭೆ-ಸಮಾರಂಭಗಳಲ್ಲಿ ಹಾರ, ಹೂಗುಚ್ಛ, ತುರಾಯಿ, ನೆನಪಿನ ಕಾಣಿಕೆ, ಹಣ್ಣಿನ ಬುಟ್ಟಿ, ಶಾಲು ಇತ್ಯಾದಿಗಳನ್ನು ಕಾಣಿಕೆಯಾಗಿ ನೀಡುವುದನ್ನು ರದ್ದುಗೊಳಿಸಿ ಸುತ್ತೋಲೆ ಹೊರಡಿಸಲಾಗಿದೆ.

ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ. ಇವೆಲ್ಲ ಕಾಣಿಕೆಗಳ ಬದಲಿಗೆ ಕನ್ನಡ ಪುಸ್ತಕಗಳನ್ನು ಕಾಣಿಕೆಯಾಗಿ ನೀಡಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಈ ನಿರ್ದೇಶನವನ್ನು ಚಾಚೂ ತಪ್ಪದೇ ಅನುಷ್ಠಾನಗೊಳಿಸಲು ಸಂಬಂಧಪಟ್ಟ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ರಾಜ್ಯ ಸರ್ಕಾರದ ಸ್ವಾಮ್ಯಕ್ಕೊಳಪಡುವ ಎಲ್ಲಾ ಸಂಸ್ಥೆಗಳು ಅಧೀನದಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ಸೂಚಿಸುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು. ಇದು ಅನವಶ್ಯಕ ವೆಚ್ಚ, ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು ಅವರು ತಿಳಿಸಿದರು. ಇದರ ಬೆನ್ನಲ್ಲೇ ಇದೀಗ ಈ ಸುತ್ತೋಲೆ ಜಾರಿಗೊಂಡಿದೆ.

Leave A Reply

Your email address will not be published.