ಕಡಬ : ಶಾಲೆಯಿಂದ ಮನೆಗೆ ತೆರಳುತ್ತಿದ್ದ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ | ರಕ್ಷಣೆಗೆ ಬಾಲಕಿ ಬೊಬ್ಬೆ ಹೊಡೆದಾಗ ಅಪರಿಚಿತ ವ್ಯಕ್ತಿ ಎಸ್ಕೇಪ್

Share the Article

ಇಂದು ಸಂಜೆ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಬಾಲಕಿಯೋರ್ವಳಿಗೆ ಅಪರಿಚಿತ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದು,ಆ ಬಳಿಕ ವ್ಯಕ್ತಿ ಸ್ಥಳದಿಂದ ಕಾಲ್ಕಿತ್ತ ಘಟನೆ ಕಡಬ ತಾಲೂಕಿನ ನೆಟ್ಟಣದಲ್ಲಿ ನಡೆದಿದೆ.

ಘಟನೆ ವಿವರ:ಪ್ರೌಢ ಶಾಲಾ ವಿದ್ಯಾರ್ಥಿಯೊಬ್ಬಳು ಇಂದು ಸಂಜೆ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ದಾರಿಯಲ್ಲಿ ಸಿಕ್ಕ ಅಪರಿಚಿತ ವ್ಯಕ್ತಿಯೋರ್ವ ಅಸಭ್ಯವಾಗಿ ವರ್ತಿಸಿದ್ದು,ಲೈಂಗಿಕ ಕಿರುಕುಳ ನೀಡಲು ಮುಂದಾದಾಗ ಬಾಲಕಿಯು ಬೊಬ್ಬೆ ಹೊಡೆದಿದ್ದು, ತಕ್ಷಣವೇ ಅಪರಿಚಿತ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ. ಇದೀಗ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಪರಿಚಿತ ವ್ಯಕ್ತಿಯ ಪತ್ತೆಗೆ ಬಲೆ ಬೀಸಿದ್ದಾರೆ.

Leave A Reply