ಬಂಟ್ವಾಳ :ಪೈಪ್ ಲೈನ್ ಕೊರೆದು ಪೆಟ್ರೋಲಿಯಂ ಉತ್ಪನ್ನ ಕಳ್ಳತನ |ಪ್ರಕರಣದ ಪ್ರಮುಖ ಆರೋಪಿ ಬಂಧನ

ಬಂಟ್ವಾಳ: ಕಳೆದ ಕೆಲ ದಿನಗಳ ಹಿಂದೆ ಬಂಟ್ವಾಳ ಅರಳ ಗ್ರಾಮದಲ್ಲಿ ಬೆಳಕಿಗೆ ಬಂದಿದ್ದ ಆಯಿಲ್ ಮತ್ತು ನ್ಯಾಚುರಲ್ ಲಿಮಿಟೆಡ್ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗೆ ಸೇರಿದ ಪೆಟ್ರೋಲಿಯಂ ಪೈಪ್ ಲೈನ್ ಕೊರೆದು ಪೈಪ್ ಅಳವಡಿಸಿ ಸುಮಾರು 40 ಲಕ್ಷದ ಪೆಟ್ರೋಲಿಯಂ ಉತ್ಪನ್ನ ಕಳ್ಳತನ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಪ್ರಕರಣದ ಮಾಸ್ಟರ್ ಮೈಂಡ್ ಆದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಐವನ್ ಚಾವ್ ಪಿಂಟೋ ಪ್ರಮುಖ ಆರೋಪಿಯಾಗಿದ್ದು
,ಬಂಧಿತನಿಂದ ಕೃತ್ಯಕ್ಕೆ ಬಳಸಿದ ಒಂದು ಜೀಪ್ ಡಿಸೇಲ್ ಕೊಂಡು ಹೋಗಲು ಬಳಸಿದ ಕ್ಯಾನ್ ಗಳು ಮತ್ತು ಡಿಸೇಲ್ ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೃತ್ಯದಲ್ಲಿ ಪೈಪ್ ಲೈನ್ ಗೆ ಹೋಲ್ ತೆಗೆದು ವೆಲ್ಲಿಂಗ್ ಮಾಡಿ ಪೈಪ್ ಲೈನ್ ಅಳವಡಿಸಿದ ವೆಲ್ಡರ್ ಗಳಾದ ಪಚ್ಚನಾಡಿ ಬೋಂದೆಲ್ ನಿವಾಸಿ ಅಜಿತ್ ಮತ್ತು ಕಣ್ಣೂರು ನಿವಾಸಿ ಜೋಯೆಲ್ ಪ್ರೀತಮ್ ಡಿ’ಸೋಜನನ್ನು ಈಗಾಗಲೇ ಬಂಧಿಸಲಾಗಿದ್ದು, ಉಳಿದ ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿರುತ್ತಾರೆ.ತಲೆಮರೆಸಿಕೊಂಡಿರುವ ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸಲಾಗುವುದೆಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

ಜಿಲ್ಲಾ ಪೊಲೀಸ್ ಅಧೀಕ್ಷಕರ ನಿರ್ದೇಶನದಂತೆ ಮಾನ್ಯ ಪೊಲೀಸ್ ಉಪಾಧೀಕ್ಷಕರು, ಬಂಟ್ವಾಳ ಉಪವಿಭಾಗ ರವರ ಮಾರ್ಗದರ್ಶನದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಟಿ.ಡಿ ನಾಗರಾಜ್ ರವರ ನೇತೃತ್ವದಲ್ಲಿ, ಬಂಟ್ವಾಳ ಗ್ರಾಮಾಂತರ ಠಾಣಾ ಪಿ.ಎಸ್.ಐ ಪ್ರಸನ್ನ ಹೆಚ್.ಸಿಗಳಾದ ಜನಾರ್ಧನ, ಗೋಣಿಬಸಪ್ಪ, ಸುರೇಶ್ ಪಿ.ಸಿಗಳಾದ ಮನೋಜ್, ಪುನೀತ್ ರವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Leave A Reply

Your email address will not be published.