ಚಾರ್ಮಾಡಿ ಘಾಟಿಯಲ್ಲಿ ಲಘು ವಾಹನಗಳಿಗೆ 24 ಗಂಟೆಯೂ ಸಂಚರಿಸಲು ಗ್ರೀನ್ ಸಿಗ್ನಲ್

ಮಳೆಯಿಂದಾಗಿ ಗುಡ್ಡ ಕುಸಿತದ ಭೀತಿ ಎದುರಾಗಿದ್ದ ಚಾರ್ಮಾಡಿ ಘಾಟ್ ನಲ್ಲಿ ಇದೀಗ ಲಘು ವಾಹನಗಳಿಗೆ ರಾತ್ರಿ ಸಂಚಾರಕ್ಕೆ ಅನುಮತಿ ಸಿಕ್ಕಿದೆ.

ರಾತ್ರಿ ಸಮಯದಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ನೀಡಿದೆ. ಇದರಿಂದಾಗಿ ದಿನದ 24 ಗಂಟೆ ಚಾರ್ಮಾಡಿ ಮೂಲಕ ಎಲ್ಲಾ ಲಘು ವಾಹನಗಳು ಸಂಚರಿಸಬಹುದಾಗಿದೆ.

ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಆದೇಶ ಹೊರಡಿಸಿದ್ದಾರೆ. ಉಳಿದಂತೆ ಕೆಎಸ್‌ಆರ್ ಟಿಸಿ ಬಸ್, 6 ಚಕ್ರದ ಲಾರಿಗಳ ಸಂಚಾರಕ್ಕೆ ಬೆಳಿಗ್ಗೆ ಆರರಿಂದ ಸಂಜೆ ಏಳರವರೆಗೆ ಮಾತ್ರ ಅವಕಾಶವಿದೆ.

ರಾತ್ರಿ ವೇಳೆಯಲ್ಲಿ ಘನ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಇನ್ನು ಭಾರೀ ಗಾತ್ರದ ವಾಹನಗಳ ಸಂಚಾರವನ್ನು ಸದ್ಯಕ್ಕೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿದುಬಂದಿದೆ.

Leave A Reply

Your email address will not be published.