ಪುತ್ತೂರು | ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ, ಇಬ್ಬರ ಬಂಧನ

ಪುತ್ತೂರು: ಸಾಲ್ಮರ ಸಮೀಪದ ಮನೆಯೊಂದರಲ್ಲಿ ಅಕ್ರಮ ಕಸಾಯಿಖಾನೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.

ನಿನ್ನೆ ಮಧ್ಯ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿಗಳಿಬ್ಬರನ್ನು ಪೊಲೀಸರು ಸ್ಥಳದಲ್ಲೇ ಬಂಧಿಸಿದ್ದಾರೆ.

ಎಪಿಎಂಸಿ ರಸ್ತೆಯ ಸಾಲ್ಮರ ಮೌಂಟನ್ ವ್ಯೂ ಶಾಲೆಯ ಸಮೀಪದ ಮನೆಯೊಂದರಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಯುತ್ತಿದೆ ಎಂಬ ಮಾಹಿತಿಯನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಪೊಲೀಸರ ಗಮನಕ್ಕೆ ತಂದಿದ್ದರು.

ಈ ಬಗ್ಗೆ ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ, ಅಕ್ರಮ ದನದ ಮಾಂಸ ಇರುವುದನ್ನು ಖಚಿತ ಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

Leave A Reply

Your email address will not be published.