ಮನೆಯಂಗಳದಲ್ಲಿ ಆಡುತ್ತಿದ್ದ ಮಗುವಿನ ಮೇಲೆ ಬಿದ್ದ ಅಡಿಕೆ ಮರ, ನಾಲ್ಕು ವರ್ಷದ ಮಗು ದುರಂತ ಸಾವು

Share the Article

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಅಡಿಕೆ ಮರ ಬಿದ್ದ ಪರಿಣಾಮ ನಾಲ್ಕು ವರ್ಷದ ಮಗು ಸಾವನ್ನಪ್ಪಿದ ಘಟನೆ ಭದ್ರಾವತಿ ತಾಲೂಕಿನ ಸಿದ್ಧರಮಟ್ಟಿಯ ದೇವರಹಟ್ಟಿ ಗ್ರಾಮದಲ್ಲಿ ನಡೆದಿದೆ.

ಸಂತೋಷ್ ಎಂಬವರ ಮನೆಯಲ್ಲಿ, ಅವರ ಮಗಳು ಆಧ್ಯಾ(4) ಮನೆ ಮುಂದೆ ಆಟವಾಡುತ್ತಿದ್ದಾಗ ಒಮ್ಮೆಲೆ ಅಡಿಕೆ ಮರ ಬಿದ್ದಿದೆ.

ತಕ್ಷಣವೇ ಮಗುವನ್ನು ಭದ್ರಾವತಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆಯನ್ನು ಕೊಡಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖ್ಯಾತ ಮಕ್ಕಳ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಮಗು ಸಾವನ್ನಪ್ಪಿದೆ.

ಈ ಕುರಿತು ಸಂತೋಷ್ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Leave A Reply