ಶಾಲೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಡ್ಡಾಯವಾಗಿ ಆಚರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆದೇಶ

ವಿದ್ಯಾರ್ಥಿಗಳ ಹಾಜರಾತಿಯಿಲ್ಲದೇ ಈ ವರ್ಷವೂ ಶಾಲೆಯ ಆವರಣದಲ್ಲಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಕೋವಿಡ್ ನ ಎಲ್ಲಾ ನಿಯಮಾವಳಿಗಳನ್ನು ಅನುಸರಿಸುವುದರ ಜೊತೆಗೆ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ವೀಡಿಯೋವನ್ನು ಶಾಲೆಯ ಶಿಕ್ಷಕರು ಆನ್ ಲೈನ್ ನಲ್ಲಿ ಮಕ್ಕಳಿಗೆ ಶೇರ್ ಮಾಡಬೇಕು. ತರಗತಿಗಳಿಗೆ ಹಾಜರಾಗಲು ಅನುಮತಿಸದ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಮ್ಮತಿಯಿಲ್ಲ. ಮತ್ತೊಂದೆಡೆ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯ ಮುಖ್ಯಸ್ಥರು, ಸದಸ್ಯರು ಮತ್ತು ಮುಖ್ಯ ಶಿಕ್ಷಕರು, ಇತರ ನಾಗರಿಕರು ಆಚರಣೆಯಲ್ಲಿ ಭಾಗವಹಿಸಬಹುದಾಗಿದೆ.

ಸ್ವಾತಂತ್ರ್ಯ ದಿನಾಚರಣೆ ನಂತರ, ವಿದ್ಯಾರ್ಥಿಗಳು ದಿನದ ಮಹತ್ವ, ರಸಪ್ರಶ್ನೆ ಮತ್ತು ರಾಷ್ಟ್ರೀಯತೆಯ ಬಗ್ಗೆ ನಡೆಯುವ ವಿವಿಧ ಸ್ಪರ್ಧೆಗಳಲ್ಲಿ ಆನ್ ಲೈನ್ ಚರ್ಚೆಯಲ್ಲಿ ಭಾಗವಹಿಸಬೇಕು. ಸ್ವಾತಂತ್ರ್ಯ ಹೋರಾಟಗಾರರ ಪ್ರಾಮುಖ್ಯತೆ ಮತ್ತು ಸ್ವಾತಂತ್ರ್ಯ ಹೋರಾಟದ ಮಹತ್ವದ ಬಗ್ಗೆ ಅರಿಯಬೇಕಾಗಿದೆ ಎಂದು ಸುತ್ತೋಲೆ ಹೊರಡಿಸಿದೆ.

Ad Widget
Ad Widget

Ad Widget

Ad Widget

Leave a Reply

error: Content is protected !!
Scroll to Top
%d bloggers like this: