ಕಡಬ : ಎಸ್.ಡಿ.ಪಿ.ಐ ಮತ್ತು ಪಿ.ಎಫ್.ಐ ಸಂಘಟನೆಯನ್ನು ನಿಷೇಧಿಸಲು ಮನವಿ

ಕಡಬ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಡಬ ಪ್ರಖಂಡ, ಹಿಂದೂ ಜಾಗರಣ ವೇದಿಕೆ ಕಡಬ ತಾಲೂಕು ಮತ್ತು ಭಾರತೀಯ ಜನತಾ ಪಾರ್ಟಿ ಕಡಬ ಇದರ ನೇತೃತ್ವದಲ್ಲಿ
ಎಸ್ ಡಿ ಪಿ ಐ ಮತ್ತು ಪಿ ಫ್ ಐ ಸಂಘಟನೆಯನ್ನು ನಿಷೇಧಿಸಲು ಮತ್ತು ಕಬಕದಲ್ಲಿ ಸ್ವಾತಂತ್ರ್ಯ ದಿನ ರಥಯಾತ್ರೆಯನ್ನು ತಡೆದು ನಿಲ್ಲಿಸಿ ಬಂಧಿತರಾಗಿರುವ ಎಸ್ ಡಿ ಪಿಐ ಕಾರ್ಯಕರ್ತರ ಮೇಲೆ ದೇಶದ್ರೋಹ ಕೇಸು ದಾಖಲಿ ಸುವಂತೆ ಒತ್ತಾಯಿಸಿ ಕಡಬ ಪೊಲೀಸ್ ಠಾಣೆಯಲ್ಲಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಕಡಬ ಪ್ರಖಂಡ ಅಧ್ಯಕ್ಷರಾದ ರಾಧಾಕೃಷ್ಣ ಕೋಲ್ಪೆ , ಹಿಂದೂ ಜಾಗರಣ ವೇದಿಕೆ ಪ್ರಾಂತ ಸಂಪರ್ಕ ಪ್ರಮುಖ್ ರವಿರಾಜ್ ಶೆಟ್ಟಿ ಕಡಬ , ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಉಪಾಧ್ಯಕ್ಷರಾದ ಪ್ರಕಾಶ್ ಎನ್ .ಕೆ ಹಾಗೂ ಕಾರ್ಯಕರ್ತರು ಉಪಸ್ಥಿರಿದ್ದರು.

Leave a Reply

Ad Widget >>^
Ad Widget
error: Content is protected !!
Scroll to Top
%d bloggers like this: