ನಗರ ಕೇಂದ್ರೀಕೃತ ತಂತ್ರಜ್ಞಾನದ ವಿಕೇಂದ್ರೀಕರಣ ಸರಕಾರದ ಗುರಿ -ರಾಜೀವ್ ಚಂದ್ರ ಶೇಖರ್

ಮಂಗಳೂರು,ಆ.18: ನಗರ ಕೇಂದ್ರೀಕೃತ ತಂತ್ರಜ್ಞಾನದ ವಿಕೇಂದ್ರೀಕರಣಗೊಳಿಸುವ ಯೋಜನೆ ಸರಕಾರದ ಮುಂದಿದೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.

ಜನಾರ್ಶೀವಾದ ಯಾತ್ರೆಯ ಹಿನ್ನೆಲೆಯಲ್ಲಿ ನಗರಕ್ಕೆ ಭೇಟಿ ನೀಡಿದ್ದ ಅವರು ನಗರದ ಓಶಿಯನ್ ಪರ್ಲ್ ಸಭಾಂಗಣದಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಕರ್ನಾಟಕದಲ್ಲಿ ಬೆಂಗಳೂರು ಹಾಗೂ ದೇಶದಲ್ಲಿ ಪುಣೆ, ಚೆನ್ನೈ, ಮುಂಬಯಿ ಸೇರಿದಂತೆ ಮಹಾನಗರಗಳನ್ನು ಕೇಂದ್ರೀಕರಿಸಿ ಆಗಿರುವ ತಂತ್ರಜ್ಞಾನ ಕ್ಷೇತ್ರವನ್ನು ಇತರ ಜಿಲ್ಲೆಗಳಿಗೂ ವಿಸ್ತರಿಸುವ ಉದ್ದೇಶ ಹೊಂದಿರುವುದಾಗಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.

Ad Widget


Ad Widget


Ad Widget

Ad Widget


Ad Widget

ಖಾಸಗಿ ಮತ್ತು ಸಾರ್ವಜನಿಕ ಜಂಟಿ ಸಹಯೋಗದೊಂದಿಗೆ ಐಟಿ ಪಾರ್ಕ್ ಗಳನ್ನು ಅಭಿವೃದ್ಧಿ ಪಡಿಸುವ ಯೋಜನೆ ಸರಕಾರ ಹೊಂದಿದೆ. ಕರ್ನಾಟಕದಲ್ಲಿ ಪ್ರತಿ ಜಿಲ್ಲೆಯಲ್ಲಿ ಒಂದು ಹಳ್ಳಿಯನ್ನು ಆಯ್ಕೆ ಮಾಡಿಕೊಂಡು ಭಾರತ್ ನೆಟ್ ಯೋಜನೆಯ ಮೂಲಕ ಸಂಪೂರ್ಣ ಡಿಜಿಟಲ್‌ ಸಂಪರ್ಕ ಕಲ್ಪಿಸುವ ಪೈಲಟ್ ಯೋಜನೆ ಈಗಾಗಲೇ ಜಾರಿಗೊಂಡಿದೆ ಎಂದು ರಾಜೀವ್ ಚಂದ್ರ ಶೇಖರ್ ತಿಳಿಸಿದ್ದಾರೆ.

ಕೋವಿಡ್ ನಂತರ ಐ.ಟಿ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಇದರಿಂದಾಗಿ ದೇಶದ ವಿವಿಧ ನಗರ ಪ್ರದೇಶಗಳಲ್ಲಿ ಕೇಂದ್ರೀಕೃತವಾಗಿದ್ದ ಡಿಜಿಟಲ್ ನೆಟ್ ವರ್ಕ್ ವ್ಯವಸ್ಥೆ ಯನ್ನು ಇತರ ಕಡೆಗಳಲ್ಲಿಯೂ ಅಭಿವೃದ್ಧಿ ಪಡಿಸಬೇಕಾದ ಅನಿವಾರ್ಯತೆ ಸೃಷ್ಟಿ ಯಾಗಿದೆ. ಈ ಹಿನ್ನೆಲೆಯಲ್ಲಿ ಭಾರತ್ ನೆಟ್ ಯೋಜನೆಯ ಮೂಲಕ ಖಾಸಗಿ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಡಿಜಿಟಲ್ ಸಂಪರ್ಕ ಜಾಲದ ಮೂಲಕ ಐ.ಟಿ.ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಿರುವುದಾಗಿ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದ ಐಟಿ ಪಾರ್ಕ್ ನಿರ್ಮಾಣದ ಬಗ್ಗೆ ಸರಕಾರದ ಚಿಂತನೆ ಇದೆ ಎಂದು ಸಚಿವ ರಾಜೀವ್ ಚಂದ್ರ ಶೇಖರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ,ಸಂಸದರು ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್,ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡಬಿದ್ರೆ, ಶಾಸಕರಾದ ವೇದವ್ಯಾಸ ಕಾಮತ್,ಸಂಜೀವ ಮಠಂದೂರು,‌ಪ್ರತಾಪ್ ಸಿಂಹ ನಾಯಕ್, ಮಾಜಿ ಶಾಸಕ ಮೋನಪ್ಪ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.

Leave a Reply

Ad Widget >>^
Ad Widget
error: Content is protected !!
Scroll to Top
%d bloggers like this: