ನಾಥೂರಾಮ್ ಗೋಡ್ಸೆ ಗೆ ಜೈ !! ನಟಿ ಅನಿತಾ ಭಟ್ ಮಾತಿಗೆ ವ್ಯಕ್ತವಾಗಿದೆ ವಿರೋಧ | ಗೋಡ್ಸೆ ಹಾಗೂ ಬ್ರಾಹ್ಮಣರ ಬಗೆಗೆ ಅನಿತಾ ಹೇಳಿದ್ದಾದರೂ ಏನು?

ಬಿಗ್‌ಬಾಸ್ ಸ್ಪರ್ಧಿ, ನಟಿ ಅನಿತಾ ಭಟ್ ನಾಥೂರಾಮ್ ಗೋಡ್ಸೆ ಮತ್ತು ಬ್ರಾಹ್ಮಣರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿದ್ದು, ಅದೀಗ ಭಾರೀ ಚರ್ಚೆಗೆ ನಾಂದಿ ಹಾಡಿದೆ. ಅವರು ಮಾಡಿದ ಟ್ವೀಟ್ ಗೆ ಮಿಶ್ರ ಪ್ರತಿಕ್ರಿಯೆಯೂ ಸಹ ವ್ಯಕ್ತವಾಗಿದೆ.

ತಮ್ಮ ಟ್ವಿಟರ್ ಖಾತೆಯಲ್ಲಿ ಈ ಕುರಿತು ಸರಣಿ ಟ್ವಿಟ್ ಮಾಡಿರುವ ನಟಿಯ ಬಗ್ಗೆ ಇದೀಗ ಎಲ್ಲೆಡೆ ಚರ್ಚೆ ಶುರುವಾಗಿದೆ. ಅಷ್ಟಕ್ಕೂ ನಟಿ ಮಾಡಿರುವ ಟ್ವಿಟ್ ಏನೆಂದರೆ ಗಾಂಧಿಯನ್ನು ಕೊಂದ ಗೋಡ್ಸೆಗೆ ಜೈಕಾರ ಹಾಕಿದ್ದು.

ಗೋಡ್ಸೆ ದೇಶಪ್ರೇಮಿ ಎಂದ ನಟಿ

ನಾಥೂರಾಮ್ ಗೋಡ್ಸೆ ದೊಡ್ಡ ದೇಶಪ್ರೇಮಿ ಎಂದಿರುವ ನಟಿ ಅನಿತಾ, ಈ ಕುರಿತಾಗಿ ಸ್ಪಷ್ಟನೆ ಕೂಡ ನೀಡಿದ್ದಾರೆ. ಗಾಂಧಿಯನ್ನು ಕೊಂದು ಎಂಥಹ ದುರಂತಕ್ಕೆ ಸಿಕ್ಕಿ ಹಾಕಿಕೊಳ್ಳಬಹುದು ಎಂದು ಆತನಿಗೆ ಗೊತ್ತಿತ್ತು. ಆದರೂ ಆತ ಆ ರೀತಿ ಮಾಡಿದ ಎಂದರೆ ಅವನ ದೇಶಪ್ರೇಮ ಎಷ್ಟಿತ್ತೆಂದು ತಿಳಿಯುತ್ತದೆ. ಆದ್ದರಿಂದ ಆತನ ದೇಶಪ್ರೇಮಕ್ಕೆ ಜೈ. ದೇಶಕ್ಕಿಂತ ಏನೂ ದೊಡ್ಡದಲ್ಲ. ಇನ್ನೆಷ್ಟು ಚೂರಾಗ್ತಾ ಇತ್ತೋ ನಮ್ಮ ಭಾರತ ಎನ್ನುವ ದೇಶಪ್ರೇಮದಿಂದ ಅವನು ಹೀಗೆ ಮಾಡಿದ್ದಾನೆ ಎಂದಿದ್ದಾರೆ.

ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದ ಗೋಡ್ಸೆ ಅವರು ದೇಶಭಕ್ತನೇ. ಅವರನ್ನು ಭಯೋತ್ಪಾದಕ ಅಂತ ಕರೆಯೋದು ನಿಮ್ಮ ಅಜ್ಞಾನಕ್ಕೆ ಹಿಡಿದು ಕೈಗನ್ನಡಿ. ಯಾರೋ ಒಬ್ಬರಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿಲ್ಲ. ಕೋಟಿಗಟ್ಟಲೆ ವೀರರು ನಮ್ಮ ದೇಶಕ್ಕಾಗಿ ಬಲಿದಾನ ಮಾಡಿದ್ದಾರೆ ಅನ್ನೋದು ಅರಿತುಕೊಂಡರೆ ಸಾಕು ಎಂದಿದ್ದಾರೆ.

ಮುಂದೆ ನೆಗೆಟಿವ್ ಕಾಮೆಂಟ್ ಬರುತ್ತಿರುವುದನ್ನು ಗಮನಿಸಿದ ಅವರು, ನನ್ನ ಟ್ವಿಟ್ಟರ್, ಪೋಸ್ಟ್ ಮಾಡುವುದು ನನ್ನ ಆಯ್ಕೆ. ನನ್ನ ಅಭಿಪ್ರಾಯವನ್ನು ನಿಮ್ಮ ಕೆಟ್ಟ ಕಾಮೆಂಟ್‍ಗಳು ಬದಲಾಯಿಸುವುದಿಲ್ಲ. ಇಷ್ಟಕ್ಕೆಲ್ಲ ಹೆದರೋ ಹಾಗಿದ್ರೆ ಭೂಮಿಯಿಂದಾನೆ ಹೋಗಿ ಬಿಡ್ತಿದ್ದೆ ಇಷ್ಟೊತ್ತಿಗೆ. ಎಷ್ಟು ಬೇಕಾದ್ರೂ ಗಂಟಲು ಹರ್ಕೊಳಿ ಹೋಗಿ ಎಂದು ಗರಂ ಆಗಿಯೇ ಉತ್ತರಿಸಿದ್ದಾರೆ.

ಬ್ರಾಹ್ಮಣರು ಬಡಪಾಯಿಗಳು:

ಇನ್ನೊಂದು ಟ್ವಿಟ್‌ನಲ್ಲಿ ಅನಿತಾ, ಬ್ರಾಹ್ಮಣರು ತಮ್ಮ ಪದವಿ ಮುಂದೆ ಜಾತಿ ಹೆಸರು ಹಾಕಿದ ಹಾಗೆ ನಾನೇನಾದ್ರೂ ಬ್ರಾಹ್ಮಣ ನಟಿ ಅಂತ ಹಾಕಿದ್ದೇನಾ? ಜಾತಿ ಹೆಸರು ಹೇಳಿ ಕೆಲಸ ಗಿಟ್ಟಿಸೋ ಗತಿ ಇನ್ನು ನನಗೆ ಬಂದಿಲ್ಲ. ದೇವಸ್ಥಾನದ ಪ್ರಸಾದ ತಿಂದು ಬದುಕಿದ್ರೂ ಸರಿ. ಅದಕ್ಕೆ ಬ್ರಾಹ್ಮಣ್ಯ ಅನ್ನೋ ಹೆಸರು ಯಾಕ್ರೀ? ಬೇರೆ ಜಾತಿಯವರೂ ಮಾಡ್ತಾರೆ ಅಂದ್ರೆ ಅವರವರ ಜಾತಿ ಹೆಸರು ಹಾಕಿ.

ಬಡಪಾಯಿ ಬ್ರಾಹ್ಮಣರು ಮೂಗು ಮುಸ್ಕೊಂಡು ಕೂತಿದ್ದಾರೆ, ಅದಕ್ಕೆ ಬೇಕಾಬಿಟ್ಟಿ ಮಾತಾಡ್ತಾರೆ ಅಷ್ಟೇ ಎಂದು ಟ್ವಿಟ್‌ನಲ್ಲಿ ಹೇಳಿದ್ದಾರೆ.

ಅದಕ್ಕೆ ಒಬ್ಬ ನೆಟ್ಟಿಗ, ತಾವೇ ಸರ್ವಶ್ರೇಷ್ಠರು ಅನ್ನೋ ವಾದ, ಮಡಿವಂತಿಕೆ ಆಚರಣೆಗಳು ಇದೆಯಲ್ಲ ಅದೇ ಬ್ರಾಹ್ಮಣ್ಯ. ಅದಕ್ಕೆ ಎಲ್ಲರ ವಿರೋಧ ಅಷ್ಟೇ. ಅದು ಬಿಟ್ಟರೆ ಎಲ್ಲರೂ ಒಂದೇ, ಯಾರು ಸಹ ಮೇಲಿಲ್ಲ ಕೀಳಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ.

ನನ್ನ ಅಮ್ಮ ಎಷ್ಟೋ ವರ್ಷಗಳ ಹಿಂದೇನೆ ಜಾತಿ ಪದ್ದತಿಯನ್ನ ದೂರ ಇಟ್ಟಿದ್ದಾರೆ. ಒಂದು ಲಂಬಾಣಿ ಹುಡುಗಿ ನಮ್ಮ ಮನೆಯಲ್ಲಿ ಓದೋಕೆ ಅಂತ 4 ವರ್ಷ ಇದ್ದಳು. ನಮ್ಮನೇ ದೇವರ ಪೂಜೆ ಕೂಡ ಮಾಡಿದ್ದಾಳೆ. ನನಗೆ ಇದರಲ್ಲಿ ವಿಶೇಷತೆ ಏನು ಕಂಡಿಲ್ಲ. ಸಂದರ್ಭ ಬಂದಿದ್ದರಿಂದ ಹೇಳಿದೆ ಅಷ್ಟೇ ಎಂದು ಅದಕ್ಕೆ ನಟಿ ಉತ್ತರಿಸಿದ್ದಾರೆ.

ಅನಿತಾ ಭಟ್, 2008ರಲ್ಲಿ ಬಿಡುಗಡೆ ಆದ ‘ಸೈಕೊ’ ಸಿನಿಮಾದ ಮೂಲಕ ಚಂದನವನಕ್ಕೆ ಕಾಲಿಟ್ಟದ್ದಾರೆ. ನಂತರ ‘ಡರ್ಟಿ ಪಿಕ್ಚರ್; ಸಿಲ್ಕ್ ಸಖತ್ ಹಾಟ್ ಮಗಾ’, ‘ದೊಡ್ಮನೆ ಹುಡ್ಗಾ’, ‘ಟಗರು'(ಡಾಲಿ ಗರ್ಲ್‍ಫ್ರೆಂಡ್ ಪಾತ್ರ), ‘ಹೊಸ ಕ್ಲೈಮ್ಯಾಕ್ಸ್’, ‘ಡಿಎನ್‍ಎ’, ‘ಕನ್ನೇರಿ’, ‘ಕಲಿವೀರ’, ‘ಬೆಂಗಳೂರು-69’, ‘ಬಳೆಪೇಟೆ’, ‘ಜೂಟಾಟ’, ತೆಲುಗಿನ ‘ಕೃಷ್ಣ ಲಂಕಾ’ ಸಿನಿಮಾ ಸೇರಿದಂತೆ ಇನ್ನೂ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಈಕೆ ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ನಲ್ಲಿ ಭಾಗವಹಿಸಿ ಜನಪ್ರಿಯರಾಗಿದ್ದರು.

Leave A Reply

Your email address will not be published.