ಇಂದಿನಿಂದ ಮೂರು ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ | ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಬುಧವಾರದಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ, ಕೊಡಗು, ರಾಮನಗರ, ಮೈಸೂರು, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಅಧಿಕ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ ಎಂದು ತಿಳಿಸಿದೆ.
ಹವಾಮಾನ ಇಲಾಖೆಯು ಕರಾವಳಿಯಲ್ಲಿ ಮಳೆಯ ಆರ್ಭಟ ಹೆಚ್ಚಾಗುವ ಸೂಚನೆಯಿದ್ದು, ಮೀನುಗಾರಿಕೆಗೆ ಇಳಿಯದಂತೆ ಎಚ್ಚರಿಕೆ ನೀಡಿದೆ.