ದ.ಕ : ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ 1 ವರ್ಷದ ಅವಧಿಗೆ ವಿವಿಧ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಉಳ್ಳಾಲದ ನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಪಿಶಿಯನ್ ಮತ್ತು ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞರ ಹುದ್ದೆಗೆ, ಜಿಲ್ಲಾ ವೆನ್ಹಾಕ್ ಆಸ್ಪತ್ರೆಗೆ ಮಕ್ಕಳ ತಜ್ಞರ ಹುದ್ದೆಗೆ, ಜಿಲ್ಲಾ ವೆಸ್ಲಾಕ್ ಆಸ್ಪತ್ರೆ ಹಾಗೂ ಸರಕಾರಿ ಲೇಡಿಗೋಶನ್ ಆಸ್ಪತ್ರೆಗೆ ಶುಶೂಷಕಿ ಹುದ್ದೆಗೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ (ಎಎನ್ಎಂ) ಹುದ್ದೆಗೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಿರಿಯ ಪುರುಷ ಆರೋಗ್ಯ ಸಹಾಯಕ ಹುದ್ದೆಗೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಫಾರ್ಮಸಿಸ್ಟ್ ಹುದ್ದೆಗೆ, ಎನ್‌ಪಿಪಿಸಿಡಿ ಘಟಕಕ್ಕೆ ಶ್ರವಣ ದೋಷವಿರುವ ಮಕ್ಕಳಿಗೆ ಭೋಧಕ (Instructor for Hearing Impaired Children) ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು http://www.dkhfw.in ನಲ್ಲಿ ಅರ್ಜಿ ಪಡೆದು ಅಗತ್ಯ ದಾಖಲೆ ಲಗತ್ತಿಸಿ ಆ.26ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ದೂ.ಸಂ: 0824-2424501ನ್ನು ಸಂಪರ್ಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

Ad Widget


Ad Widget


Ad Widget

Ad Widget


Ad Widget

Leave a Reply

Ad Widget >>^
Ad Widget
error: Content is protected !!
Scroll to Top
%d bloggers like this: