ಅಫ್ಘಾನಿಸ್ತಾನದಲ್ಲಿ ಸಂಕಷ್ಟದಲ್ಲಿರುವ ಕನ್ನಡಿಗರಿಗಾಗಿ ನೋಡಲ್ ಅಧಿಕಾರಿ-ಆರಗ ಜ್ಞಾನೇಂದ್ರ

ಅಫ್ಘಾನಿಸ್ತಾನದಲ್ಲಿ ಎಷ್ಟು ಜನ ಭಾರತೀಯರು ಸಿಲುಕಿಕೊಂಡಿದ್ದಾರೆ ಎನ್ನುವ ಮಾಹಿತಿ ಇದೆ. ಅವರನ್ನು ಯಾವುದೇ ತೊಂದರೆಯಾಗದಂತೆ ಕರೆದುಕೊಂಡು ಬರುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಲಿದೆ. ರಾಜ್ಯದಿಂದಲೂ ಸಿಐಡಿಯಲ್ಲಿ ಕರ್ತವ್ಯದಲ್ಲಿರುವ ಉಮೇಶ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿದ್ದೇವೆ. ಸಂಕಷ್ಟದಲ್ಲಿರುವ ಕನ್ನಡಿಗರು ಅವರನ್ನು ಸಂಪರ್ಕ ಮಾಡಬಹುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಅವರು ಶುಕ್ರವಾರ ಮಂಗಳೂರಿನಲ್ಲಿ ಪತ್ರಕರ್ತರ ಜತೆ ಮಾತನಾಡಿದರು

ಕರಾವಳಿಯಲ್ಲಿ ಭಯೋತ್ಪಾದನಾ ಚಟುವಟಿಕೆ ಬಹಳ ವರ್ಷಗಳಿಂದ ನಡೆಯುತ್ತಿದೆ. ಅದನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ನಿಗಾ ಇಡಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ರಾಜ್ಯ ಸರ್ಕಾರ ವಿಶೇಷವಾಗಿ ಗಮನ ಹರಿಸಲಿದೆ. ಕೇಂದ್ರ ಸರ್ಕಾರದೊಂದಿಗೆ ಮಾತನಾಡಿ, ಎನ್‌ಐಎ ಕಚೇರಿ ಸ್ಥಾಪನೆ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದರು.

Ad Widget


Ad Widget


Ad Widget

Ad Widget


Ad Widget

Leave a Reply

Ad Widget >>^
Ad Widget
error: Content is protected !!
Scroll to Top
%d bloggers like this: