ಪುತ್ತೂರು-ಕಡಬ : ಲಸಿಕೆ ವಿತರಣೆಯಲ್ಲಿ ಯಾವುದೇ ಸಮಸ್ಯೆ ಇಲ್ಲ, ಗುರಿ ಮೀರಿದ ಸಾಧನೆ -ಡಾ.ದೀಪಕ್ ರೈ

ಪುತ್ತೂರು:ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಆ.18ರಂದು ಕೊರೋನಾ ಲಸಿಕೆ ವಿತರಣೆಯಲ್ಲಿ ಗುರು ಮೀುದ ಸಾಧನೆಯಾಗಿದೆ.ಉಭಯ ತಾಲೂಕುಗಳಿಗೆ ಈ ದಿನ 4800 ಲಸಿಕೆ ವಿತರಣೆಯ ಗುರಿ ನೀಡಲಾಗಿತ್ತು.ಆದರೆ 5400 ಮಂದಿಗೆ ಲಸಿಕೆ ವಿತರಣೆ ಮಾಡಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ತಿಳಿಸಿದ್ದಾರೆ.

 

ಪುತ್ತೂರು ಮತ್ತು ಕಡಬ ತಾಲೂಕುಗಳ ಪ್ರಾಥಮಿಕ ಆರೋಗ್ಯ ಕೇಂದ್ರ,ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ವಿತರಣೆ ಕಾರ್ಯಕ್ರಮವನ್ನು ನಿರಂತರವಾಗಿ ಮಾಡಲಾಗುತ್ತಿದ್ದು, ಆಯಾ ಆಸ್ಪತ್ರೆಗಳಲ್ಲಿ ಲಭ್ಯವಿರುವ ಲಸಿಕೆಗಳ ಕುರಿತಂತೆ ಮಾಹಿತಿ ನೀಡಲಾಗುತ್ತದೆ.ಆಶಾ ಕಾರ್ಯಕರ್ತೆಯರು ಈ ಕುರಿತಂತೆ ಸಾರ್ವಜನಿಕರಿಗೆ ಮಾಹಿತಿ ರವಾನಿಸುತ್ತಾರೆ.ಲಸಿಕೆ ವಿತರಣೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ,ಸಾರ್ವಜನಿಕರೂ ಸಹಕಾರ ನೀಡುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪುತ್ತೂರು ಮತ್ತು ಕಡಬ ತಾಲೂಕುಗಳಲ್ಲಿ ಕೊರೋನಾ ಸೋಂಕಿತರ ಪ್ರಕರಣಗಳು ಇಳಿಮುಖವಾಗಿದ್ದು ಬುಧವಾರ ಉಭಯ ತಾಲೂಕುಗಳಲ್ಲಿ ಒಟ್ಟು 21 ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಪುತ್ತೂರು ತಾಲೂಕಿನಲ್ಲಿ 16 ಮತ್ತು ಕಡಬ ತಾಲೂಕಿನಲ್ಲಿ 11 ಪ್ರಕರಣಗಳು ವರದಿಯಾಗಿವೆ.ಕೇರಳಕ್ಕೆ ಹೊಂದಿಕೊಂಡಿರುವ ತಾಲೂಕಿನ ಗಡಿ ಭಾಗಗಳಲ್ಲೂ ಬಿಗು ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಸಹಕಾರಿಯಾಗಿದೆ ಎಂದು ಡಾ.ದೀಪಕ್ ರೈ ಹೇಳಿದ್ದಾರೆ.

Leave A Reply

Your email address will not be published.