ಬೆಳ್ತಂಗಡಿ | ಲಾಯಿಲ ಪ್ರಸನ್ನ ಕಾಲೇಜ್ ಸೀಲ್ ಡೌನ್, 11 ವಿದ್ಯಾರ್ಥಿಗಳಲ್ಲಿ ಕಂಡುಬಂದ ಮಹಾಮಾರಿ

ದ.ಕ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಸನ್ನ ಕಾಲೇಜನ್ನು ಸೀಲ್ ಡೌನ್ ಮಾಡಲಾಗಿದೆ.

ಪ್ರಸನ್ನ ಕಾಲೇಜ್ ನ ಹಾಸ್ಟೆಲ್ ನಲ್ಲಿರುವ 11 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಆ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಸೋಂಕು ಪತ್ತೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಈಗಾಗಲೇ ಕೋವಿಡ್ ಕೇರ್ ಸೆಂಟರ್ ಗೆ ಸ್ಥಳಾಂತರಿಸಲಾಗಿದೆ. ಇನ್ನುಳಿದ ವಿದ್ಯಾರ್ಥಿಗಳ ಗಂಟಲ ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ.

Leave A Reply

Your email address will not be published.