ವಿಟ್ಲ | ಲಾರಿ ಹಾಗೂ ಆಕ್ಟಿವಾ ನಡುವೆ ನಡೆದ ಭೀಕರ ಅಪಘಾತ, ಸವಾರನಿಗೆ ಗಾಯ

Share the Article

ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ ಸವಾರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ನಡೆದಿದೆ.

ಪೇರಮುಗೇರು ನಿವಾಸಿ ರುಕ್ಮಯ ಗಾಯಗೊಂಡ ದ್ವಿಚಕ್ರ ವಾಹನ ಸವಾರ.

ರುಕ್ಮಯ ಅವರು ಉಪ್ಪಿನಂಗಡಿ ಕಡೆಯಿಂದ ಮಾಣಿ ಕಡೆಗೆ ಹೋಗುತ್ತಿದ್ದಾಗ ಅವರ ವಾಹನಕ್ಕೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಆಕ್ಟಿವಾ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸವಾರ ಸಣ್ಣಪುಟ್ಟ ಗಾಯಗಳಿಂದ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Leave A Reply