ಬೇಕರಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ | ಇಬ್ಬರು ಸಜೀವ ದಹನ

ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಜೀವ ದಹನವಾಗಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಈ ದುರ್ಘಟನೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಎಂಎಂ ಫುಡ್ ಫ್ಯಾಕ್ಟರಿಯಲ್ಲಿ ಸಂಭವಿಸಿದೆ.

ಮೃತರನ್ನು ಮನೀಶ್ ಮತ್ತು ಸೌರಭ್ ಎಂದು ಗುರುತಿಸಲಾಗಿದ್ದು, ಇಬ್ಬರೂ ಬಿಹಾರ ಮೂಲದವರು.

ಬೇಕರಿಗೆ ಬೇಕಾದ ಸಿಹಿ ತಿನಿಸುಗಳನ್ನು ಸಿದ್ಧಪಡಿಸಲಾಗುತ್ತಿದ್ದಾಗ ಮಧ್ಯಾಹ್ನ 1.45ರ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡಿದೆ. ಈ ವೇಳೆ 6 ಮಂದಿ ಕೆಲಸ ಮಾಡುತ್ತಿದ್ದರು.

Ad Widget
Ad Widget

Ad Widget

Ad Widget

ಗಾಯಗೊಂಡ ನಾಲ್ವರನ್ನು ವಿಕ್ಟೋರಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಸಿಪಿ ಹಾಗೂ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ

Leave a Reply

error: Content is protected !!
Scroll to Top
%d bloggers like this: