ಸಮಯಕ್ಕೆ ಸರಿಯಾಗಿ ಕೋವಿಡ್ ಕರ್ತವ್ಯ ನಿರ್ವಹಣೆಯ ಸಿಬ್ಬಂದಿಗಳಿಗೆ ವೇತನ ನೀಡಿ,ಇಲ್ಲದಿದ್ದಲ್ಲಿ ಅಧಿಕಾರಿಗಳ ವಿರುದ್ದ ಕಾನೂನು ಕ್ರಮ- ಎಸ್.ಅಂಗಾರ

ನಿರ್ವಹಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ವೇತನವನ್ನು ನೀಡಬೇಕು, ಒಂದು ವೇಳೆ ತಡವಾಗಿ ವೇತನ ನೀಡಿದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮೀನುಗಾರಿಕೆ ಸಚಿವ ಎಸ್.ಅಂಗಾರ, ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು.

ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣೆ ಹಾಗೂ ಕೋವಿಡ್ ನಿಯಂತ್ರಣ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಹೆಚ್ಚಿದ್ದು ಅದರ ನಿರ್ವಹಣೆ, ನಿಯಂತ್ರಣ ಹಾಗೂ ಶುಶ್ರೂಷೆಯಲ್ಲಿ ತೊಡಗಿರುವ ಸಿಬ್ಬಂದಿಗೆ ಕಾಲಕಾಲಕ್ಕೆ ವೇತನ ಪಾವತಿಸುವುದು ಸಂಬಂಧಿಸಿದ ಅಧಿಕಾರಿಗಳ ಕರ್ತವ್ಯ. ಈ ಹಿನ್ನೆಲೆಯಲ್ಲಿ ಪ್ರಯೋಗಾಲಯ ತಂತ್ರಜ್ಞರು, ಸ್ಟಾಫ್ ನಸ್‌ರ್ಗಳು ಹಾಗೂ ಊಟ ಉಪಾಹಾರ ಒದಗಿಸುವ ಕ್ಯಾಂಟೀನ್‌ಗಳಿಗೆ ಕಾಲಕಾಲಕ್ಕೆ ವೇತನ ಪಾವತಿಸಬೇಕು. ಇದರಲ್ಲಿ ವಿಳಂಬ ತೋರುವ ತಹಶೀಲ್ದಾರರು ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಅಥವಾ ಅವರನ್ನು ಅಮಾನತು ಮಾಡಬೇಕು ಸಚಿವರು ಸೂಚಿಸಿದರು.

Leave A Reply

Your email address will not be published.