ಜೆಡಿಎಸ್‌ಗೆ ಗುಡ್‌ಬೈ ಹೇಳಿದ ದೇವೇ ಗೌಡ | ಕುಮಾರಸ್ವಾಮಿ ಆಡಿದ ಮಾತು ಮರೆಯಲು ಸಾಧ್ಯವಿಲ್ಲ | ಕಾಂಗ್ರೇಸ್ ಗೆ ಸೇರಲಿರುವ ಜೆಡಿಎಸ್ ಮುಖಂಡ

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್ ಪಕ್ಷ ತೊರೆಯುವುದಾಗಿ ಅಧಿಕೃತ ಘೋಷಣೆ ಮಾಡಿದ್ದಾರೆ.

ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರಲ್ಲಿ ನಾನು ಕ್ಷಮೆ ಕೇಳುತ್ತೇನೆ, ಅವರ ಆಶೀರ್ವಾದದಿಂದ ಈ ಮಟ್ಟಕ್ಕೆ ಬೆಳೆದಿದ್ದೇನೆ. ಆದರೆ ಈಗಿನ ಪರಿಸ್ಥಿತಿ ಬೇರೆಯಾಗಿದ್ದು, ನಾನು ಕಾಂಗ್ರೆಸ್ ಪಕ್ಷ ಸೇರಲು ನಿರ್ಧರಿಸಿದ್ದೇನೆ’ ಎಂದು ತಿಳಿಸಿದ್ದಾರೆ.

‘ಈಗಾಗಲೇ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ್ದು, ನನಗೆ ಮತ್ತು ನನ್ನ ಮಗನಿಗೆ ಟಿಕೆಟ್ ಕೊಡುವ ಭರವಸೆ ನೀಡಿದ್ದಾರೆ, ಸಿದ್ದರಾಮಯ್ಯ ಅವರು ನಾನು ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಚಾಮುಂಡೇಶ್ವರಿ ಕ್ಷೇತ್ರ ಬಿಟ್ಟುಕೊಡುವುದಾಗಿ ಹೇಳಿದ್ದಾರೆ’ ಎಂದು ತಿಳಿಸಿದರು.

‘ಕಾಂಗ್ರೆಸ್ ಯಾವತ್ತೂ ಇಬ್ಬಾಗ ಆಗಿಲ್ಲ, ಸಹಜವಾಗಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯರ ಅಭಿಮಾನಿಗಳು ಇಬ್ಬರು ನಾಯಕರುಗಳು ಮುಖ್ಯಮಂತ್ರಿಯಾಗಬೇಕು ಎಂದು ಘೋಷಣೆ ಕೂಗುತ್ತಿದ್ದಾರೆ. ಆದರೆ ನಾನು ಇಬ್ಬರೂ ನಾಯಕರುಗಳ ಜೊತೆ ಮಾತುಕತೆ ನಡೆಸಿದ್ದೇನೆ’ ಎಂದು ಹೇಳಿದರು.

‘ನಾಳೆ ಮೈಸೂರಿನಲ್ಲಿ ನಡೆಯುವ ಮೇಯರ್ ಚುನಾವಣೆಗೆ ಹೋಗಬೇಕೊ ಬೇಡವೋ ಇನ್ನೂ ತೀರ್ಮಾನ ಆಗಿಲ್ಲ, ಕುಮಾರಸ್ವಾಮಿ ಆಡಿರುವ ಮಾತುಗಳನ್ನು ನಾನು ಮರೆಯಲು ಸಾಧ್ಯವಿಲ್ಲ, ಎಂದು ಹೇಳಿದರು.

Leave A Reply

Your email address will not be published.