ಕೋವಿಡ್ ಟೆಸ್ಟ್‌ ನಿರ್ವಹಣೆಗೆ ನೂತನ ಕಾರ್ಯತಂತ್ರ -ಡಾ.ಕೆ.ಸುಧಾಕರ್

ಕೋವಿಡ್‌ನ ಮೂರನೇ ಅಲೆ ತಡೆಗೆ ಮುಂಜಾಗ್ರತಾ ಕ್ರಮವಾಗಿ ಸೋಂಕಿನ ಪರೀಕ್ಷೆಯ ನಿರ್ವಹಣೆಗೆ ಹೊಸ ಕಾರ್ಯತಂತ್ರ ರೂಪಿಸಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಕೋವಿಡ್ ಮೂರನೇ ಅಲೆ ತಡೆಗೆ ಮುಂಜಾಗ್ರತಾ ಕ್ರಮವಾಗಿ ಟೆಸ್ಟಿಂಗ್ ನಿರ್ವಹಣೆಗೆ ನೂತನ ಕಾರ್ಯತಂತ್ರ
ರೂಪಿಸಲಾಗಿದೆ. ಜಿಲ್ಲಾವಾರು ಪರೀಕ್ಷಾ ಗುರಿಯನ್ನು 1.75
ಲಕ್ಷಕ್ಕೆ ಏರಿಸಲಾಗಿದೆ. ಒಟ್ಟು ಪರೀಕ್ಷೆಗಳಲ್ಲಿ ಶೇ.10%ರಷ್ಟು
ಪರೀಕ್ಷೆಗಳನ್ನು ಕಡ್ಡಾಯವಾಗಿ 18 ವರ್ಷ ಕೆಳಗಿನ ಮಕ್ಕಳಿಗೆ
ಮಾಡಬೇಕು ಎಂದು ಸೂಚಿಸಲಾಗಿದೆ ಎಂದವರು ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಹರಡುವಿಕೆ ಮೇಲೆ ನಿಗಾ ವಹಿಸಲು ಒಟ್ಟಾರೆ ಪರೀಕ್ಷೆಗಳಲ್ಲಿ 50 ಶೇ. ಪರೀಕ್ಷೆಗಳನ್ನು ತಾಲೂಕು ಕೇಂದ್ರ ಪ್ರದೇಶದ ಹೊರಗೆ ನಡೆಸಲು ಸೂಚಿಸಲಾಗಿದೆ. ಪಾಸಿಟಿವಿಟಿ ದರ ಶೇ.5ಕ್ಕಿಂತ ಕಡಿಮೆ ಇರುವ ಗ್ರಾ.ಪಂ./ಪಟ್ಟಣ ಪ್ರದೇಶಗಳಲ್ಲಿ ರೋಗಲಕ್ಷಣರಹಿತ ಪ್ರಕರಣಗಳನ್ನು ಪೂಲಿಂಗ್ ಮೂಲಕ ಪರೀಕ್ಷೆಗೊಳಪಡಿಸಲಾಗುವುದು ಎಂದು ಸಚಿವರು ವಿವರಿಸಿದ್ದಾರೆ.

Leave A Reply

Your email address will not be published.