ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಸಾರಿಗೆ ಸಚಿವ | ಬಸ್ ಪಾಸ್ ವಿಚಾರದಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡ ಶ್ರೀರಾಮುಲು
ಸಾರಿಗೆ ನಿಗಮಗಳ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ಯಲ್ಲಿ ಮಾತಾಡಿದ ಸಾರಿಗೆ ಸಚಿವರಾದ ಬಿ. ಶ್ರೀರಾಮುಲು,ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲಿದೆ ಎಂದು ಹೇಳಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಭೆಯ ಬಗ್ಗೆ ವಿವರಿಸಿದ ಸಚಿವರು,ಡೀಸೆಲ್ ದರ ಏರಿಕೆಯಾಗಿರುವುದರಿಂದ ಹೆಚ್ಚಾಗಿರುವ ವೆಚ್ಚ, ಪ್ರಯಾಣ ದರದ ಬಗ್ಗೆಯೂ ಚರ್ಚೆ ನಡೆಸಲಾಗಿದೆ ಎಂದು ಪತ್ರಿಕಾಗೋಷ್ಠಿಗೆ ತಿಳಿಸಿದ್ದಾರೆ.
ಆದರೆ ಡೀಸೆಲ್ ದರ ಹೆಚ್ಚಾದರೂ,ಬಸ್ ಪ್ರಯಾಣ ದರ ಏರಿಕೆಯ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ 9 ರಿಂದ 12 ನೇ ತರಗತಿ ಸೇರಿದಂತೆ ಆಯ್ದ ಕಾಲೇಜುಗಳು ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬಸ್ ಪಾಸ್ ವಿತರಿಸಲಾಗುತ್ತದೆ.
ಈ ಬಾರಿ ಆನ್ಲೈನ್ ನಲ್ಲಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಬಸ್ ಪಾಸ್ ಪಡೆದುಕೊಳ್ಳಬಹುದಾಗಿದ್ದು,ಬಸ್ ಪಾಸ್ ದರ ಹೆಚ್ಚಳ ಮಾಡುವ ಉದ್ದೇಶವಿಲ್ಲ ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ಹಾಗೆಯೇ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲಿದ್ದು,ಇದಕ್ಕೆ ತಗಲುವ ವೆಚ್ಚವನ್ನು ಪರಿಶಿಷ್ಟ ಪಂಗಡ ಸಚಿವಾಲಯದ ವತಿಯಿಂದ ಭರಿಸಲಾಗುವುದು ಎಂದು ಹೇಳಿದ್ದಾರೆ.