ದ.ಕ. : 627 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ | ಮಾರ್ಗಸೂಚಿ ಪಾಲನೆ ಮಾಡದ ಕಾಲೇಜುಗಳಿಗೆ ನೋಟಿಸ್

Share the Article

ದ.ಕ. ಜಿಲ್ಲೆಯ 627 ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್‌ ದೃಢವಾಗಿದೆ.ಈ ಕುರಿತು ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು ಮಾರ್ಗಸೂಚಿ ಪಾಲನೆ ಮಾಡದ ಕಾಲೇಜ್‌ಗಳನ್ನು ಪತ್ತೆ ಹಚ್ಚಿ ನೋಟಿಸ್‌ ನೀಡಲು ಮುಂದಾಗಿದೆ.

ಕಳೆದ 15 ದಿನಗಳಲ್ಲಿ ದ.ಕ. ಜಿಲ್ಲೆಯ 29 ಕಾಲೇಜುಗಳ 627 ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್‌ ಪತ್ತೆಯಾಗಿದೆ. ಈ ಪೈಕಿ 327 ಮಂದಿ ಕೇರಳ ಭಾಗದವರು. ಉಳಿದಂತೆ ದ.ಕ. ಸೇರಿದಂತೆ ಹೊರ ಜಿಲ್ಲೆ, ರಾಜ್ಯಗಳ ವಿದ್ಯಾರ್ಥಿಗಳು ಸೇರಿದ್ದಾರೆ. ಜಿಲ್ಲೆಯ ಕಾಲೇಜುಗಳಲ್ಲಿ/ಹಾಸ್ಟೆಲ್‌ಗ‌ಳಲ್ಲಿ ಕೊರೊನಾ ಮಾರ್ಗಸೂಚಿ ಪಾಲನೆ ಕಡ್ಡಾಯ ಎಂದು ಆರೋಗ್ಯ ಇಲಾಖೆ ಈಗಾಗಲೇ ಸೂಚನೆ ನೀಡಿದ್ದು, ಇದೀಗ ಪಾಲನೆ ಮಾಡದ ಕಾಲೇಜುಗಳಿಗೆ ಎಚ್ಚರಿಕೆ ನೀಡಿ ನೋಟಿಸ್‌ ನಿರ್ಧರಿಸಿದೆ.

ಸುಳ್ಯದ ಖಾಸಗಿ ಕಾಲೇಜ್‌ವೊಂದರಲ್ಲಿ ಕಳೆದ ಮೂರು ವಾರಗಳಲ್ಲಿ 77 ಮಂದಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಬಾಧಿಸಿದೆ.

Leave A Reply