ಚಾರ್ಮಾಡಿ : ರಸ್ತೆ ಬದಿ ನಿಂತಿದ್ದ ಲಾರಿಗೆ ಪಿಕಪ್ ಡಿಕ್ಕಿ

Share the Article

ಬೆಳ್ತಂಗಡಿ : ಚಾರ್ಮಾಡಿಯಲ್ಲಿ ರಸ್ತೆ ಬದಿ ನಿಂತಿದ್ದ ಲಾರಿಯೊಂದಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ.

ಚಾರ್ಮಾಡಿ ಪಂಚಲಿಂಗೇಶ್ವರ ದೇವಸ್ಥಾನದ ಸಮೀಪ ಲಾರಿಯನ್ನು ನಿಲ್ಲಿಸಿದ್ದ ಸಂದರ್ಭದಲ್ಲಿ ಮೂಡಿಗೆರೆಯ ಕಡೆಗೆ ಹೋಗುತ್ತಿದ್ದ ಪಿಕಪ್ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಲಾರಿಯ ಮುಂಭಾಗದ ಗಾಜು ಸಂಪೂರ್ಣವಾಗಿ ಪುಡಿಪುಡಿಯಾಗಿದ್ದು, ಎರಡೂ ವಾಹನಗಳ ಚಾಲಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Leave A Reply