ದೇಶದಲ್ಲಿ ಸದ್ದಿಲ್ಲದೆ ದಂಡೆತ್ತಿ ಬರುತ್ತಿರುವ ಕೊರೋನಾ | 24 ಗಂಟೆಯಲ್ಲಿ 44648 ಕೇಸುಗಳು, 496 ಜನರ ಸಾವು

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 44,658 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಕೊರೋನಾ ಮತ್ತೆ ಕಳವಳ ಸೃಷ್ಟಿಸಿದೆ. ನಿಧಾನವಾಗಿ ನಮ್ಮ ಗಮನಕ್ಕೆ ಬಾರದಂತೆ ಸಂಖ್ಯೆ ಏರಿಕೆ ಕಾಣುತ್ತಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3, 26,03,188ಕ್ಕೆ ಏರಿಕೆಯಾಗಿದೆ. 32,988 ಸೋಂಕಿತರು ಗುಣಮುಖರಾಗಿದ್ದು,  ಗುಣಮುಖರಾದವರ ಸಂಖ್ಯೆ 3, 18,21,428ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಒಟ್ಟು 496 ಸೋಂಕಿತರು ಮೃತಪಟ್ಟಿದ್ದು, ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 4,36,861ಕ್ಕೆ ಏರಿಕೆಯಾಗಿದೆ.ದೇಶದಲ್ಲಿ ಸದ್ಯ 3,44,899 ಸಕ್ರಿಯ ಪ್ರಕರಣಗಳಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ನಿನ್ನೆ ದಿನ 18,24,931 ಮಾದರಿಗಳ ಪರೀಕ್ಷೆ ಸೇರಿದಂತೆ ಒಟ್ಟಾರೇ, 51,49,54,309 ಸ್ಯಾಂಪಲ್ ಗಳನ್ನು ಪರೀಕ್ಷೆ ಮಾಡಲಾಗಿದೆ. ಕಳೆದ 24 ಗಂಟೆಗಳಲ್ಲಿ 78,48,439 ಡೋಸ್ ಕೋವಿಡ್ ಲಸಿಕೆ ನೀಡಲಾಗಿದ್ದು, ಒಟ್ಟಾರೇ, 61, 22,08,542 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

Ad Widget
Ad Widget

Ad Widget

Ad Widget

Leave a Reply

error: Content is protected !!
Scroll to Top
%d bloggers like this: