ನಳಿನ್ ನಾಯಕತ್ವದಲ್ಲೇ ಮುಂದಿನ ಚುನಾವಣೆ-ಬೊಮ್ಮಾಯಿ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲು ಅವರು ಎರಡು ವರ್ಷ ಯಶಸ್ವಿಯಾಗಿ ಪೂರೈಸಿದ್ದಾರೆ. ಅವರ ಅಧಿಕಾರ ಅವಧಿಯಲ್ಲಿ ಪಕ್ಷ ಬಲಗೊಂಡಿದೆ. ಪಕ್ಷ ಬಹಳಷ್ಟು ಸಂಘಟಿತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಪತ್ರಕರ್ತರ ಜತೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲ್ ಇಡೀ ರಾಜ್ಯವನ್ನ ಐದು ಬಾರಿ ಪ್ರವಾಸ ಮಾಡಿದ್ದಾರೆ. ಸಾಮಾನ್ಯ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ತುಂಬಿದ್ದಾರೆ. ಸರ್ಕಾರದಲ್ಲಿ ರಚನೆಯಲ್ಲಿ ಬಹಳ ಮಹತ್ವ ಪಾತ್ರ ಇದೆ ಎಂದರು.

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಬೈ ಎಲೆಕ್ಷನ್ ಗಳು ಅವರ ನೇತೃತ್ವದಲ್ಲಿಯೇ ನಡೆಯುತ್ತದೆ. ಬರುವ ದಿನಗಳಲ್ಲಿ ಅವರ ನಾಯಕತ್ವವನ್ನು ಜನರು ಎದುರು ನೋಡುತ್ತಿದ್ದಾರೆ. ಮೂರು ಮಹಾನಗರ ಪಾಲಿಕೆ ಚುನಾವಣೆಗಳು ಅವರ ನೇತೃತ್ವದಲ್ಲಿ ನಡೆಯುತ್ತದೆ. ನಮಗೆ ಗೆಲ್ಲುವ ವಿಶ್ವಾಸವಿದೆ ಎಂದು ಸಿಎಂ ಬೊಮ್ಮಯಿ ಹೇಳಿದರು

Ad Widget
Ad Widget

Ad Widget

Ad Widget

Leave a Reply

error: Content is protected !!
Scroll to Top
%d bloggers like this: