ಬಜತ್ತೂರು : ನಿಲ್ಲಿಸಿದ್ದ ಲಾರಿಗೆ ಪಿಕಪ್ ಡಿಕ್ಕಿ | ಲಾರಿಯ ದುರಸ್ತಿಯಲ್ಲಿ ತೊಡಗಿದ್ದ ಮೂವರು ಸಾವು

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ಬೆದ್ರೋಡಿಯಲ್ಲಿ ನಿಂತಿದ್ದ ಲಾರಿಯೊಂದಕ್ಕೆ ಪಿಕಪ್ ಡಿಕ್ಕಿಯಾಗಿ ದುರಸ್ತಿ ಕೆಲಸ ಮಾಡುತ್ತಿದ್ದ ಮೂವರ ಪೈಕಿ ಮೂವರು ಮೃತಪಟ್ಟಿದ್ದಾರೆ.

ಬೆದ್ರೋಡಿ ಬಸ್‌ನಿಲ್ದಾಣದ ಬಳಿ ಲಾರಿಯೊಂದು ಕೆಟ್ಟು ನಿಂತಿದ್ದು ಇದರ ದುರಸ್ತಿ ಕೆಲಸ ನಡೆಯುತ್ತಿತ್ತು. ಈ ವೇಳೆ ಉಪ್ಪಿನಂಗಡಿ ಕಡೆಯಿಂದ ಬಂದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಗುದ್ದಿದ್ದು ಈ ವೇಳೆ ದುರಸ್ತಿ ಕೆಲಸದಲ್ಲಿ ನಿರತರಾಗಿದ್ದ ಮೂವರ ಪೈಕಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಓರ್ವ ಆಸ್ಪತ್ರೆಯ ಸಾಗಿಸುವ ಹಾದಿಯಲ್ಲಿ ಮೃತಪಟ್ಟರು ಎನ್ನಲಾಗಿದೆ.

Leave A Reply

Your email address will not be published.