ಸೈಬರ್ ಕ್ರೈಂ ಪೊಲೀಸ್ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ಆತ್ಮಹತ್ಯೆ

Share the Article

ಬೆಂಗಳೂರು : ಹೆಡ್ ಕಾನ್ಸ್ ಟೇಬಲ್ ಓರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಗಿರಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಸದಾಶಿವ ಎಂದು ಗುರುತಿಸಲಾಗಿದೆ. ಅವರು ಸೈಬರ್ ಕ್ರೈಂ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ಭಾರತೀಯ ಸೇನೆಯಲ್ಲಿ 17 ವರ್ಷ ಸೇವೆ ಸಲ್ಲಿಸಿದ್ದರು. ನಂತರ ನಿವೃತ್ತಿ ಆಗಿ, ಪೊಲೀಸ್ ಇಲಾಖೆಗೆ ಸೇರಿದ್ದರು. ವಿಜಯನಗರ ಠಾಣೆಯಲ್ಲಿ 8 ವರ್ಷ ಕಾರ್ಯ ನಿರ್ವಹಿಸುತ್ತಿದ್ದ ಬಳಿಕ ಸಿಸಿಬಿ ಸೈಬರ್ ಕ್ರೈಂನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.

ನಿನ್ನೆ ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave A Reply