ವಾಯುಭಾರ ಕುಸಿತ. ಇನ್ನೆರಡು ದಿನ ಕರಾವಳಿಯಲ್ಲಿ ಭಾರಿ ಮಳೆ | ಆರೆಂಜ್ ಅಲರ್ಟ್ ಘೋಷನೆ

ಬಂಗಾಳ ಉಪಸಾಗರದ ಒರಿಸ್ಸಾ ಮತ್ತು ಆಂಧ್ರಪ್ರದೇಶದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಕರ್ನಾಟಕ ಮತ್ತು ಕೇರಳ ಕರಾವಳಿಯಾದ್ಯಂತ ರವಿವಾರ ಬಿರುಸಿನಿಂದ ಕೂಡಿದ ಮಳೆಯಾಗಿದೆ.

ಜಿಲ್ಲೆಯ ಮಂಗಳೂರು, ಬೆಳ್ತಂಗಡಿ, ಧರ್ಮಸ್ಥಳ, ಮಡಂತ್ಯಾರು, ನಾರಾವಿ, ಪೂಂಜಾಲಕಟ್ಟೆ, ಕಲ್ಲಡ್ಕ, ಬಿ.ಸಿ. ರೋಡು, ಬಂಟ್ವಾಳ, ಕನ್ಯಾನ, ವಿಟ್ಲ, ಪುತ್ತೂರು, ಉಪ್ಪಿನಂಗಡಿ, ಕಡಬ, ಸುಳ್ಯ, ಸುಬ್ರಹ್ಮಣ್ಯ, ಗುತ್ತಿಗಾರು, ಉಳ್ಳಾಲ, ಸುರತ್ಕಲ್‌, ಮುಲ್ಕಿ, ಮೂಡುಬಿದಿರೆ ಸೇರಿದಂತೆ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಳೆಯಾಗಿದೆ.

ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳ ಪ್ರಕಾರ ಆ. 30 ಮತ್ತು 31ರಂದು ರಾಜ್ಯ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ಆ.30ರಂದು “ಆರೆಂಜ್‌ ಅಲರ್ಟ್‌’ ಘೋಷಿಸಲಾಗಿದ್ದು, ಆ. 31ರಂದು “ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ. ಐಎಂಡಿ ಮಾಹಿತಿಯಂತೆ ರವಿವಾರ ಪಣಂಬೂರಿನಲ್ಲಿ 26.5 ಡಿ.ಸೆ. ಗರಿಷ್ಠ ಮತ್ತು 22 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.

Leave A Reply

Your email address will not be published.