ಉಜಿರೆ ಬೆನಕ ಹೆಲ್ತ್ ಸೆಂಟರ್ ನ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ| ಅಂಕಿತಾ ಜಿ. ಭಟ್ ಅವರು ಎಂ.ಎಸ್ ನಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆ

ಉಜಿರೆ ಬೆನಕ ಹೆಲ್ತ್‌ ಸೆಂಟರ್‌ನ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ| ಅಂಕಿತಾ ಜಿ ಭಟ್ ರವರು ಬೆಂಗಳೂರಿನ ಬಿ.ಎಂ.ಸಿ.ಆರ್.ಐ. ಮೆಡಿಕಲ್ ಕಾಲೇಜಿನಲ್ಲಿ ಎಂ.ಎನ್. ಓ.ಬಿ.ಜಿ.(ಪ್ರಸೂತಿ ಮತ್ತು ಸ್ತ್ರೀರೋಗ) ವಿಭಾಗದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪದವಿ ಗಳಿಸಿರುತ್ತಾರೆ.

ಈಕೆ ಉಜಿರೆ ಬೆನಕ ಹೆಲ್ತ್ ಸೆಂಟರ್ ನ ವೈದ್ಯಾಧಿಕಾರಿ ಡಾ| ಗೋಪಾಲಕೃಷ್ಣ ಮತ್ತು ಡಾ| ಭಾರತೀ ಜಿ.ಕೆ.ದಂಪತಿಯ ಸುಪುತ್ರಿ.

ಇವರು ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಉಜಿರೆ ಶ್ರೀ ಧ.ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರೌಢ ಶಿಕ್ಷಣ, ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನಲ್ಲಿ ಪಿ.ಯು.ಸಿ. ಶಿಕ್ಷಣ ಪಡೆದು, ಸಿಇಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 47ನೇ ಸ್ಥಾನ ಗಳಿಸಿದ್ದರು. ನಂತರ ಮಂಗಳೂರಿನ ಪ್ರತಿಷ್ಠಿತ ಕೆ.ಎಂ.ಸಿ. ಮೆಡಿಕಲ್ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್. ವ್ಯಾಸಂಗ ಪೂರೈಸಿದ್ದರು.

ಬೆಂಗಳೂರಿನ ಪ್ರತಿಷ್ಠಿತ ಗವರ್ನಮೆಂಟ್ ಮೆಡಿಕಲ್ ಕಾಲೇಜು ಬಿ.ಎಂ.ಸಿ.ಆರ್.ಐ.ಯಲ್ಲಿ ಎಂ.ಎನ್., ಓ.ಬಿ.ಜಿ ವ್ಯಾಸಂಗ ಪೂರೈಸಿರುವ ಇವರು ಪ್ರಸ್ತುತ ಉಜಿರೆಯ ಬೆನಕ ಹೆಲ್ತ್‌ಸೆಂಟರ್‌ನಲ್ಲಿ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇದಲ್ಲದೆ ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಜೂನಿಯರ್ ಮತ್ತು ಸೀನಿಯರ್ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ವೈದ್ಯೆಯಲ್ಲದೆ, ಜೊತೆಗೆ ಉತ್ತಮ ಸಂಗೀತಗಾರ್ತಿಯಾಗಿಯೂ ಗುರುತಿಸಿಕೊಂಡಿದ್ದಾರೆ.

Leave A Reply

Your email address will not be published.